Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:45 - ಕನ್ನಡ ಸತ್ಯವೇದವು J.V. (BSI)

45 ಅವರು ಈ ಮಾತನ್ನು ಗ್ರಹಿಸಲಿಲ್ಲ; ಅದು ಅವರಿಗೆ ಮರೆಯಾದದರಿಂದ ಅದರ ಅರ್ಥವನ್ನು ಅವರು ತಿಳಿಯದೆಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವದಕ್ಕೆ ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಯೇಸು ಹೇಳಿದ ಈ ಮಾತನ್ನು ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆದರೆ ಯೇಸುವಿನ ಈ ಮಾತುಗಳು ಶಿಷ್ಯರಿಗೆ ಅರ್ಥವಾಗಲಿಲ್ಲ. ಏಕೆಂದರೆ ಅವುಗಳ ಅರ್ಥವು ಅವರಿಗೆ ಮರೆಯಾಗಿತ್ತು. ಆದರೂ ಯೇಸು ಹೇಳಿದ್ದರ ಬಗ್ಗೆ ಆತನನ್ನು ಕೇಳುವದಕ್ಕೆ ಶಿಷ್ಯರು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆದರೆ ಶಿಷ್ಯರು ಈ ಮಾತನ್ನು ತಿಳಿದುಕೊಳ್ಳಲಿಲ್ಲ. ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು, ಆ ಮಾತನ್ನು ಕುರಿತು ಯೇಸುವನ್ನು ಕೇಳುವುದಕ್ಕೆ ಅವರು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಖರೆ ಶಿಸಾಕ್ನಿ ತೊ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಕಳುಕ್‍ ನಾ, ಹೆ ತೆಂಕಾ ತವ್ಡೆ ಸೊಡ್ಸುನ್ ಸಾಂಗಲ್ಲೆ ನತ್ತೆ, ತಸೆ ಮನುನ್ ತೆಂಕಾ ಕಾಯ್ಬಿ ಕಳುಕ್‍ ನಾ. ಅನಿ ಕಾಯ್ ಮನುನ್ ಇಚಾರುಕ್‍ಬಿ ತೆಂಕಾ ಧೈರೊ ಹೊವುಕ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:45
15 ತಿಳಿವುಗಳ ಹೋಲಿಕೆ  

ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಅವುಗಳ ಅರ್ಥ ಅವರಿಗೆ ಗೊತ್ತಾಗಲಿಲ್ಲ.


ಇದು ಆತನ ಶಿಷ್ಯರಿಗೆ ಮೊದಲು ತಿಳಿದಿರಲಿಲ್ಲ. ಆದರೆ ಯೇಸು ತನ್ನ ಮಹಿಮೆಯ ಪದವಿಗೆ ಬಂದ ಮೇಲೆ ಇದು ಆತನ ವಿಷಯವಾಗಿಯೇ ಬರೆದದೆ ಎಂದೂ ಆತನಿಗೆ ನಾವು ಅದನ್ನೆಲ್ಲಾ ಮಾಡಿದೆವೆಂದೂ ಅವರ ನೆನಪಿಗೆ ಬಂತು.


ಆದರೆ ಆತನು ಹೇಳಿದ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.


ಅವರು ಆ ಮಾತನ್ನು ಗ್ರಹಿಸಲಿಲ್ಲ, ಆದರೆ ಆತನನ್ನು ಕೇಳುವದಕ್ಕೆ ಅಂಜಿದರು.


ತೋಮನು ಆತನನ್ನು - ಸ್ವಾಮೀ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ಮಾರ್ಗವು ಹೇಗೆ ತಿಳಿದೀತು ಎಂದು ಕೇಳಲು


ಅದಕ್ಕೆ ಆ ಜನರು - ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಆ ಮನುಷ್ಯಕುಮಾರನು ಯಾರು? ಅಂದರು.


ಅವರು ಈ ಮಾತನ್ನು ಹಿಡಿದು ಸತ್ತುಜೀವಿತನಾಗಿ ಏಳುವದಂದರೇನು ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.


ಆಗ ಪೇತ್ರನು ಆತನ ಕೈಹಿಡಿದು - ಸ್ವಾಮೀ, ದೇವರು ನಿನ್ನನ್ನು ಕಾಯಲಿ; ನಿನಗೆ ಹೀಗೆ ಎಂದಿಗೂ ಆಗಬಾರದು ಎಂದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು


ತರುವಾಯ ಶಿಷ್ಯರೊಳಗೆ - ತಮ್ಮಲ್ಲಿ ಯಾವನು ಹೆಚ್ಚಿನವನಾಗುವನು ಎಂಬ ವಿಚಾರ ಹುಟ್ಟಿತು.


ಅವರು ಗಲಿಲಾಯದಲ್ಲಿ ಗುಂಪುಗುಂಪಾಗಿ ಕೂಡುತ್ತಿರುವಾಗ ಯೇಸು ಅವರಿಗೆ - ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಿಕೊಡಲ್ಪಡುವನು.


ಶಿಷ್ಯರು - ಆತನಿಗೆ ಯಾರಾದರೂ ಊಟಕ್ಕೆ ತಂದುಕೊಟ್ಟರೋ ಏನೋ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು