ಲೂಕ 9:48 - ಕನ್ನಡ ಸತ್ಯವೇದವು J.V. (BSI)48 ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 “ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 “ಯಾರು ಈ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳುತ್ತಾರೋ ಅವರು ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ; ಯಾರು ನನ್ನನ್ನು ಸ್ವೀಕರಿಸಿಕೊಳ್ಳುತ್ತಾರೋ ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡವನಾಗಿರುವನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ಅನಿ ತೆಂಕಾ “ಹ್ಯಾ ಪೊರಾಕ್ ಜೆ ಕೊನ್ ಮಾಜ್ಯಾ ನಾವಾನ್ ಸ್ವಿಕಾರ್ ಕರ್‍ತಾ, ತೊ ಮಾಕಾಚ್ ಸ್ವಿಕಾರ್ ಕರ್‍ತಾ, ಅನಿ ಜೆ ಕೊನ್ ಮಾಕಾ ಸ್ವಿಕಾರ್ ಕರ್‍ತಾ, ತೊ ಮಾಕಾ ಧಾಡಲ್ಲ್ಯಾಕ್ ಸ್ವಿಕಾರ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್, ತುಮ್ಚ್ಯಾ ಮದ್ದಿ ಕೊನ್ ಖಾಲ್ತಿ ಹೊತಾ, ತೊ ಸಗ್ಳ್ಯಾಂಚ್ಯಾನ್ಕಿ ಮೊಟೊ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |