Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:49 - ಕನ್ನಡ ಸತ್ಯವೇದವು J.V. (BSI)

49 ಅದಕ್ಕೆ ಯೋಹಾನನು - ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಆಗ ಯೊವಾನ್ನನು ಯೇಸುವಿಗೆ, “ಗುರುವೇ, ಯಾವನೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವ ಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲದ ಕಾರಣ ಅವನನ್ನು ತಡೆದೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಯೋಹಾನನು, “ಗುರುವೇ, ನಿನ್ನ ಹೆಸರಿನ ಮೂಲಕ ಜನರಿಂದ ದೆವ್ವಗಳನ್ನು ಬಿಡಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ನಾವು ನೋಡಿದೆವು. ಅವನು ನಮ್ಮವನಲ್ಲದ ಕಾರಣ ನಿನ್ನ ಹೆಸರನ್ನು ಬಳಸಕೂಡದೆಂದು ಅವನಿಗೆ ಹೇಳಿದೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೋಹಾನನು, “ಬೋಧಕರೇ, ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವುದನ್ನು ನಾವು ಕಂಡು ಅವನಿಗೆ ಅಡ್ಡಿಮಾಡಿದೆವು, ಏಕೆಂದರೆ ಅವನು ನಮ್ಮೊಂದಿಗೆ ಸೇರಿದವನಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಜುವಾಂವಾಕ್ ಜೆಜುಕ್, “ಗುರುಜಿ, ತುಜ್ಯಾ ನಾವಾನ್ ಎಕ್ ಮಾನುಸ್ ಗಿರೆ ಕಾಡ್ತಲೆ ಅಮಿ ಬಗಟ್ಲ್ಯಾವ್,ಅನಿ ಅಮಿ ತೆಕಾ ತಿಯಾ ಅಶೆ ಕರ್‍ತಲೆ ಸೊಡ್ ಮನುನ್ ಸಾಂಗ್ಲಾಂವ್” “ಕಶ್ಯಾಕ್ ಮಟ್ಲ್ಯಾರ್ ತೊ ಅಮ್ಚೊ ನ್ಹಯ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:49
10 ತಿಳಿವುಗಳ ಹೋಲಿಕೆ  

ನೀವು ಈ ಹೆಸರನ್ನು ಎತ್ತಿ ಉಪದೇಶ ಮಾಡಲೇಬಾರದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆಕೊಟ್ಟೆವಲ್ಲಾ; ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ಮನುಷ್ಯನನ್ನು ಕೊಲ್ಲಿಸಿದ್ದಕ್ಕೆ ನಮ್ಮನ್ನು ಹೊಣೆಮಾಡಬೇಕೆಂದಿದ್ದೀರಿ ಎಂದು ಹೇಳಿದ್ದಕ್ಕೆ


ಅದಕ್ಕೆ ಸೀಮೋನನು - ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಹಾಕುತ್ತೇನೆ ಅಂದನು.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.


ಆಗ ಯೋಹಾನನು - ನಾನು ನಿನ್ನಿಂದ ಸ್ನಾನ ಮಾಡಿಸಿಕೊಳ್ಳತಕ್ಕವನಾಗಿರುವಲ್ಲಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿ ಆತನನ್ನು ತಡೆಯುತ್ತಾ ಇದ್ದನು.


ಇವರು ಆತನನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ - ಗುರುವೇ ನಾವು ಇಲ್ಲೇ ಇರುವದು ಒಳ್ಳೇದು, ಮೂರು ಪರ್ಣಶಾಲೆಗಳನ್ನು ಕಟ್ಟುವೆವು; ನಿನಗೊಂದು ಮೋಶೆಗೊಂದು ಎಲೀಯನಿಗೊಂದು ಎಂದು ಹೇಳಿದನು. ತಾನಂದದ್ದು ತನಗೇ ಗೊತ್ತಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು