Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:60 - ಕನ್ನಡ ಸತ್ಯವೇದವು J.V. (BSI)

60 ಆದರೆ ಆತನು ಅವನಿಗೆ - ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿಮಾಡಿಕೊಳ್ಳಲಿ; ನೀನಾದರೋ, ಹೋಗು, ದೇವರ ಸಾಮ್ರಾಜ್ಯವನ್ನು ಪ್ರಚಾರಮಾಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಯೇಸು ಅವನಿಗೆ, “ಸತ್ತಜನರೇ ತಮ್ಮವರಲ್ಲಿ ಸತ್ತುಹೋದವರ ಅಂತ್ಯಕ್ರಿಯೆ ಮಾಡಲಿ! ನೀನು ಹೋಗಿ ದೇವರ ರಾಜ್ಯದ ಬಗ್ಗೆ ತಿಳಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ, ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

60 ತನ್ನಾ ಜೆಜುನ್ ತೆಕಾ “ಮರಲ್ಲೆಚ್ ಮರಲ್ಲ್ಯಾಕ್ನಿ ಮಾಟಿ ದಿಂವ್ದಿತ್. ತಿಯಾ ಜಾ ಅನಿ ದೆವಾಚ್ಯಾ ರಾಜಾಚ್ಯಾ ವಿಶಯಾತ್ ಲೊಕಾಕ್ನಿ ಸಾಂಗ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:60
14 ತಿಳಿವುಗಳ ಹೋಲಿಕೆ  

ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.


ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ - ದೇವರ ಏಳು ಆತ್ಮಗಳೂ ಏಳು ನಕ್ಷತ್ರಗಳೂ ಉಳ್ಳಾತನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನು ಬಲ್ಲೆನು; ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂಬದನ್ನು ಬಲ್ಲೆನು.


ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು, ಶ್ರಮೆಯನ್ನು ತಾಳಿಕೋ, ಸೌವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇವಿುಸಿರುವ ಸೇವೆಯನ್ನು ಲೋಪವಿಲ್ಲದೆ ನಡಿಸು.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)


ಆತನು ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಸಹ ಬದುಕಿಸಿದನು.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇಬೇಕೆಂಬ ನಿರ್ಬಂಧ ನನಗುಂಟು. ಸಾರದಿದ್ದರೆ ನನ್ನ ಗತಿಯನ್ನು ಏನು ಹೇಳಲಿ.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಯೇಸು ಅವನಿಗೆ - ನನ್ನ ಹಿಂದೆ ಬಾ, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ ಎಂದು ಹೇಳಿದನು.


ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು. ಆಗ ಅವರು ಉಲ್ಲಾಸಪಡುವದಕ್ಕೆ ತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು