Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:7 - ಕನ್ನಡ ಸತ್ಯವೇದವು J.V. (BSI)

7 ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಪಡುವವನಾದನು. ಯಾಕಂದರೆ ಸತ್ತಿದ್ದ ಯೋಹಾನನು ತಿರಿಗಿ ಬದುಕಿಬಂದಿದ್ದಾನೆಂದು ಕೆಲವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಗೊಂಡನು, ಏಕೆಂದರೆ ಸತ್ತಿದ್ದ ಯೋಹಾನನು ತಿರುಗಿ ಬದುಕಿಬಂದಿದ್ದಾನೆಂದು ಕೆಲವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಡೆಯುತ್ತಿದ್ದ ಎಲ್ಲ ಸಂಗತಿಗಳು ಸಾಮಂತರಾಜ ಹೆರೋದನ ಕಿವಿಗೆ ಬಿದ್ದುವು. ಅವನ ಮನಸ್ಸು ಕಳವಳಗೊಂಡಿತ್ತು. ಏಕೆಂದರೆ, ‘ಯೊವಾನ್ನನು ಮರಳಿ ಜೀವಂತನಾಗಿ ಎದ್ದಿದ್ದಾನೆ’ ಎಂದು ಕೆಲವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಡೆಯುತ್ತಿದ್ದ ಎಲ್ಲಾ ಸಂಗತಿಗಳ ಬಗ್ಗೆ ರಾಜ್ಯಪಾಲ ಹೆರೋದನು ಕೇಳಿ ಗಲಿಬಿಲಿಗೊಂಡನು. ಏಕೆಂದರೆ, “ಸ್ನಾನಿಕ ಯೋಹಾನನೇ ಸತ್ತವರೊಳಗಿಂದ ಎದ್ದಿದ್ದಾನೆ” ಎಂದು ಕೆಲವರು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಏಕೆಂದರೆ ಯೋಹಾನನು ಸತ್ತವರೊಳಗಿಂದ ಎದ್ದಿದ್ದಾನೆಂದು ಕೆಲವರು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಜು-ಬಾಜುನ್ ಹೊತಲ್ಯಾ ಕಾಮಾಂಚ್ಯಾ ವಿಶಯಾತ್ ಆಯ್ಕುನ್, ಗಾಲಿಲಿಯಾಚೊ ಅದಿಕಾರಿ ಹೆರೊದ್ ಲೈ ಗೊಂದಳ್ಳೊ, ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ಲೊಕಾ ಜುವಾಂವ್ ಬಾವ್ತಿಸ್ ಝಿತ್ತೊ ಹೊವ್ನ್ ಉಟುನ್ ಯೆಲಾ ಮನುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:7
13 ತಿಳಿವುಗಳ ಹೋಲಿಕೆ  

ಅವರು - ನಿನ್ನನ್ನು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾವನೋ ಒಬ್ಬನು ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.


ಚಕ್ರವರ್ತಿಯಾದ ತಿಬೇರಿಯನು ಪಟ್ಟಕ್ಕೆ ಬಂದ ಹದಿನೈದನೆಯ ವರುಷದಲ್ಲಿ, ಪೊಂತ್ಯಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಉಪರಾಜನೂ ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ


ಅವರಲ್ಲಿ ಉತ್ತಮನೂ ಮುಳ್ಳುಕಂಪೆ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ; ನಿನ್ನ ಕಾವಲುಗಾರರು ಮುಂತಿಳಿಸಿದ ದಿನ, ನಿನ್ನ ದಂಡನೆಯ ದಿನ ಬಂದಿದೆ; ಈಗ ನಿನ್ನ ಜನರಿಗೆ ಭ್ರಾಂತಿಹಿಡಿಯುವದು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ತಗ್ಗಿಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದುಹೋಗಲು ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.


ಅವರು ನಿವಿುಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.


ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೂವಿುಯ ಮೇಲೆ ಸಮುದ್ರದ ಮತ್ತು ತೆರೆಗಳ ಘೋಷದ ನಿವಿುತ್ತವಾಗಿ ಜನಗಳಿಗೆ ದಿಕ್ಕು ಕಾಣದೆ ಸಂಕಟವು ಉಂಟಾಗುವದು.


ಯೋಹಾನನು ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿ ಕೇಳಿ ಆತನ ಬಳಿಗೆ ಶಿಷ್ಯರನ್ನು ಕಳುಹಿಸಿ -


ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.


ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಆತನಿಗೆ - ನೀನು ಇಲ್ಲಿಂದ ಹೊರಟುಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ ಎಂದು ಹೇಳಲು


ಇವನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳುಕೊಂಡು ಆತನನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿವಸಗಳಲ್ಲಿ ಯೆರೂಸಲೇವಿುನಲ್ಲೇ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು