ವಿಮೋಚನಕಾಂಡ 1:11 - ಕನ್ನಡ ಸತ್ಯವೇದವು J.V. (BSI)11 ಆದಕಾರಣ ಅವನ ಜನರು ಇಸ್ರಾಯೇಲ್ಯರನ್ನು ಬಿಟ್ಟೀಕೆಲಸದಿಂದ ಉಪದ್ರವಪಡಿಸುವದಕ್ಕಾಗಿ ಬಿಟ್ಟೀಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇಟ್ಟು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಅವರನ್ನು ಬಿಟ್ಟೀ ಕೆಲಸಗಳಿಂದ ಶ್ರಮಪಡಿಸುವುದಕ್ಕಾಗಿ, ಬಿಟ್ಟೀ ಕೆಲಸಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು. ಅಧ್ಯಾಯವನ್ನು ನೋಡಿ |