Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:13 - ಕನ್ನಡ ಸತ್ಯವೇದವು J.V. (BSI)

13 ಐಗುಪ್ತ್ಯರು ಇಸ್ರಾಯೇಲ್ಯರ ಕೈಯಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದ್ದರಿಂದ ಇಸ್ರಯೇಲರ ಬಗ್ಗೆ ಈಜಿಪ್ಟರು ಸಹಿಸಲಾರದಷ್ಟು ಹೆದರಿಕೆ ಉಳ್ಳವರಾದರು. ಇಸ್ರಯೇಲರಿಂದ ಕ್ರೂರತನದಿಂದ ಸೇವೆಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಲ್ಲದೆ ಇನ್ನೂ ಪ್ರಯಾಸಕರವಾದ ಕೆಲಸವನ್ನು ಬಲವಂತದಿಂದ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಈಜಿಪ್ಟಿನವರು ಇಸ್ರಾಯೇಲರನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಾ ಸೇವೆ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:13
8 ತಿಳಿವುಗಳ ಹೋಲಿಕೆ  

ನಿಮ್ಮನ್ನಾದರೋ ಯೆಹೋವನು ತನಗೆ ಸ್ವಕೀಯಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತಲ್ಲಾ.


ಆಗ ಯೆಹೋವನು ಅವನಿಗೆ - ನೀನು ಚೆನ್ನಾಗಿ ತಿಳಿಯತಕ್ಕದ್ದೇನಂದರೆ - ನಿನ್ನ ಸಂತತಿಯವರು ಅನ್ಯದೇಶದಲ್ಲಿ ಕೆಲವು ಕಾಲವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರುಷ ಆ ದೇಶದವರಿಂದ ಬಾಧೆಪಡುವರು.


ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಮಾಡುವ ಕೆಲಸದಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಗಳನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿಸಿದ ಎಲ್ಲಾ ಸೇವೆಯೂ ಬಹುಕಠೋರವಾಗಿತ್ತು.


ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.


ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ - ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂದು ನುಡಿದನು.


ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂಬದಾಗಿ ಹೇಳಬೇಕು ಎಂದು ಉತ್ತರಕೊಟ್ಟರು.


ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.


ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು