Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:14 - ಕನ್ನಡ ಸತ್ಯವೇದವು J.V. (BSI)

14 ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಮಾಡುವ ಕೆಲಸದಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಗಳನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿಸಿದ ಎಲ್ಲಾ ಸೇವೆಯೂ ಬಹುಕಠೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮಣ್ಣು ಅಗೆಯುವ ಕೆಲಸದಲ್ಲೂ ಇಟ್ಟಿಗೆ ಸುಡುವ ಕೆಲಸದಲ್ಲೂ ವ್ಯವಸಾಯದ ಮತ್ತಿತರ ಕೆಲಸಕಾರ್ಯಗಳಲ್ಲೂ ಕಠಿಣವಾಗಿ ಅವರಿಂದ ದುಡಿಸಿಕೊಂಡರು. ಅವರು ಮಾಡಿಸಿಕೊಳ್ಳುತ್ತಿದ್ದ ಪ್ರತಿಯೊಂದು ಕೆಲಸವು ಜೀವನವೇ ಬೇಡವೆನ್ನುವಷ್ಟು ಕಠೋರವಾಗಿ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆ, ಗಾರೆ, ಬೇಸಾಯ ಮತ್ತು ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮಣ್ಣು ಅಗೆಯುವ, ಇಟ್ಟಿಗೆಯನ್ನು ಮಾಡುವ ಮತ್ತು ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಈಜಿಪ್ಟಿನವರು ಅವರಿಂದ ಮಾಡಿಸಿದ ಎಲ್ಲಾ ಕೆಲಸವು ಕಠೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:14
30 ತಿಳಿವುಗಳ ಹೋಲಿಕೆ  

ಈ ಅರಸನು ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.


ನಮ್ಮ ಪಿತೃಗಳು ಐಗುಪ್ತದೇಶಕ್ಕೆ ಇಳಿದು ಹೋದದ್ದೂ ನಾವು ಅಲ್ಲಿ ಬಹುದಿವಸ ವಾಸವಾಗಿದ್ದದ್ದೂ ಐಗುಪ್ತ್ಯರು ನಮ್ಮನ್ನೂ ನಮ್ಮ ಪಿತೃಗಳನ್ನೂ ಉಪದ್ರವಪಡಿಸಿದ್ದೂ


ಮೋಶೆ ಈ ಮಾತುಗಳನ್ನು ಇಸ್ರಾಯೇಲ್ಯರಿಗೆ ತಿಳಿಸಿದನು. ಆದರೂ ಅವರ ಮನಸ್ಸು ಕುಗ್ಗಿ ಹೋದದರಿಂದಲೂ ಕಠಿಣವಾಗಿ ಸೇವೆಮಾಡಬೇಕಾದದರಿಂದಲೂ ಅವರು ಅವನ ಮಾತಿಗೆ ಕಿವಿಗೊಡಲೇ ಇಲ್ಲ.


ಈ ಮೇರೆಗೆ ಬಹಳ ದಿನಗಳು ಕಳೆದ ಮೇಲೆ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲ್ಯರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸುರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ, ಎಂದು ಹೇಳಿದನು.


ನೋಡಿರಿ, ಕೇಡಿನ ಬಂಧಗಳನ್ನು ಬಿಚ್ಚುವದು, ನೊಗದ ಕಣ್ಣಿಗಳನ್ನು ಕಳಚುವದು, ಜಜ್ಜಿಹೋದವರನ್ನು ಬಿಡುಗಡೆಮಾಡುವದು, ನೊಗಗಳನ್ನೆಲ್ಲಾ ಮುರಿಯುವದು,


ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.


ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಬುರುಜುಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಯನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ,


ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ, ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ; ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.


ಈಗಲೂ ಅನ್ಯರು ನನ್ನ ಜನರನ್ನು ಹಕ್ಕಿಲ್ಲದೆ ಒಯ್ದಿರಲು ನಾನು ಇಲ್ಲಿ ಸುಮ್ಮನಿರುವದು ಹೇಗೆ? ನನ್ನ ಪ್ರಜೆಯನ್ನು ಆಳುವವರು [ರೌದ್ರದಿಂದ] ಕಿರಚುತ್ತಾರೆ; ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು; ಅವರು ನಿನಗೆ - ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು ಎಂದು ಹೇಳಲು ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡಿಯಲ್ಲಾ.


ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಯೆಹೋವನು ಮುರಿದುಬಿಟ್ಟನು.


ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.


ಆಕೆಯು ಅವರಿಗೆ - ನನ್ನನ್ನು ನೊವೊವಿುಯೆಂದು ಕರೆಯಬೇಡಿರಿ; ಸರ್ವಶಕ್ತನು ನನ್ನನ್ನು ಬಹಳವಾಗಿ ದುಃಖಪಡಿಸಿದ್ದಾನೆ. ಆದದರಿಂದ ಮಾರಾ ಎಂದು ಕರೆಯಿರಿ.


ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ ಬಾಧಿಸಿ ನಮ್ಮಿಂದ ಕಠಿಣವಾಗಿ ದುಡಿಸಿಕೊಂಡಾಗ


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಕೀಯಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತಲ್ಲಾ.


ಅವನು ವರುಷವರುಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವದನ್ನು ನೀವು ನೋಡಿ ಸುಮ್ಮನೆ ಇರಬಾರದು.


ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲ್ಯರಾದ ನೀವಾದರೋ ಎಲ್ಲರೂ ಸಹೋದರರಾಗಿರುವದರಿಂದ ಒಬ್ಬರಿಂದೊಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.


ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ಐಗುಪ್ತ್ಯರು ಇಸ್ರಾಯೇಲ್ಯರ ಕೈಯಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡು


ಆಗ ಯೆಹೋವನು ಅವನಿಗೆ - ನೀನು ಚೆನ್ನಾಗಿ ತಿಳಿಯತಕ್ಕದ್ದೇನಂದರೆ - ನಿನ್ನ ಸಂತತಿಯವರು ಅನ್ಯದೇಶದಲ್ಲಿ ಕೆಲವು ಕಾಲವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರುಷ ಆ ದೇಶದವರಿಂದ ಬಾಧೆಪಡುವರು.


ಆದಕಾರಣ ಅವನ ಜನರು ಇಸ್ರಾಯೇಲ್ಯರನ್ನು ಬಿಟ್ಟೀಕೆಲಸದಿಂದ ಉಪದ್ರವಪಡಿಸುವದಕ್ಕಾಗಿ ಬಿಟ್ಟೀಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇಟ್ಟು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಇದಲ್ಲದೆ ಐಗುಪ್ತ ದೇಶದ ಅರಸನು ಶಿಪ್ರಾ ಪೂಗಾ ಎಂಬ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತಾಡಿ


ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ - ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂದು ನುಡಿದನು.


ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ನಮ್ಮ ಯೌವನಾರಭ್ಯ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆಂದು ಇಸ್ರಾಯೇಲು ಹೇಳಲಿ.


ಇಂತಿರಲು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ - ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತ್ಯರು ನಿಮಗೆ ಮಾಡಿದಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನೆತ್ತುವ ಅಶ್ಶೂರ್ಯರಿಗೆ ಭಯಪಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು