Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:15 - ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಐಗುಪ್ತ ದೇಶದ ಅರಸನು ಶಿಪ್ರಾ ಪೂಗಾ ಎಂಬ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಐಗುಪ್ತ ದೇಶದ ಅರಸನು “ಶಿಪ್ರಾ” ಮತ್ತು “ಪೂಗಾ” ಎಂಬ ಹೆಸರಿನ ಇಬ್ರಿಯ ಸೂಲಗಿತ್ತಿಯರೊಂದಿಗೆ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದೂ ಸಾಲದೆಂದು ಈಜಿಪ್ಟಿನ ಅರಸನು ಶಿಪ್ರಾ ಮತ್ತು ಪೂಗಾ ಎಂಬ ಹಿಬ್ರಿಯ ಸೂಲಗಿತ್ತಿಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲಿನ ಸ್ತ್ರೀಯರಿಗೆ ಹೆರಿಗೆ ಮಾಡಿಸಲು ಇಬ್ರಿಯರಾದ ಇಬ್ಬರು ದಾದಿಯರಿದ್ದರು. ಇವರ ಹೆಸರು: ಶಿಫ್ರಾ ಮತ್ತು ಪೂಗಾ. ಈಜಿಪ್ಟಿನ ರಾಜನು ಈ ದಾದಿಯರೊಡನೆ ಮಾತಾಡಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಜಿಪ್ಟಿನ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಹಿಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:15
4 ತಿಳಿವುಗಳ ಹೋಲಿಕೆ  

ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಮಾಡುವ ಕೆಲಸದಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಗಳನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿಸಿದ ಎಲ್ಲಾ ಸೇವೆಯೂ ಬಹುಕಠೋರವಾಗಿತ್ತು.


ಅವರಿಗೆ - ನೀವು ಇಬ್ರಿಯರ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವದು ಗಂಡುಮಗುವಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು ಎಂದು ಹೇಳಿದನು.


ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದೇವರಾದ ಯೆಹೋವನ ಭಕ್ತನು ಎಂದು ಹೇಳಿದನು.


ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ ಅಲ್ಲಿ ಸಾಲಾಗಿ ಇಟ್ಟಿದ್ದ ಪುಂಡಿಯ ಹೊರೆಗಳಲ್ಲಿ ಅಡಗಿಸಿಟ್ಟಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು