Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:8 - ಕನ್ನಡ ಸತ್ಯವೇದವು J.V. (BSI)

8 ತರುವಾಯ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಐಗುಪ್ತದೇಶದ ಆಳಿಕೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಹೊಸ ರಾಜನೊಬ್ಬನು ಈಜಿಪ್ಟ್ ದೇಶದ ಆಳ್ವಿಕೆಗೆ ಬಂದನು. ಅವನಿಗೆ ಜೋಸೆಫನ ವಿಷಯ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಳಿಕ ಒಬ್ಬ ಹೊಸ ರಾಜನು ಈಜಿಪ್ಟನ್ನು ಆಳತೊಡಗಿದನು. ಈ ರಾಜನಿಗೆ ಯೋಸೇಫನ ವಿಷಯವಾಗಿ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತರುವಾಯ ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:8
10 ತಿಳಿವುಗಳ ಹೋಲಿಕೆ  

ಕಡೆಗೆ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬಂದನು.


ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು; ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.


ಈ ಅರಸನು ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.


ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ ಬಾಧಿಸಿ ನಮ್ಮಿಂದ ಕಠಿಣವಾಗಿ ದುಡಿಸಿಕೊಂಡಾಗ


ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.


ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಈಗ ಕೇಳು, ಇಸ್ರಾಯೇಲ್ಯರ ಕೂಗು ನನಗೆ ಮುಟ್ಟಿತು; ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.


ನೀನು ಹೋಗಿ ಇಸ್ರಾಯೇಲ್ಯರ ಹಿರಿಯರನ್ನು ಕೂಡಿಸಿ ಅವರಿಗೆ - ನಿಮ್ಮ ಪಿತೃಗಳ ದೇವರು ಅಂದರೆ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ - ನಾನು ನಿಮ್ಮಲ್ಲಿ ಲಕ್ಷ್ಯವಿಟ್ಟು ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ತಿಳುಕೊಂಡಿದ್ದೇನೆ;


ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ ಯೆಹೋವನನ್ನೂ ಆತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು