ವಿಮೋಚನಕಾಂಡ 10:1 - ಕನ್ನಡ ಸತ್ಯವೇದವು J.V. (BSI)1 ತರುವಾಯ ಯೆಹೋವನು ಮೋಶೆಗೆ ಇಂತೆಂದನು - ಫರೋಹನ ಬಳಿಗೆ ತಿರಿಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ಈ ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಆಸ್ಪದವಾಗುವದಕ್ಕೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹಿಂತಿರುಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಹೃದಯಗಳನ್ನು ಕಠಿಣಗೊಳಿಸಿದ್ದೇನೆ. ಏಕೆಂದರೆ ನಾನು ಈ ಮಹತ್ಕಾರ್ಯಗಳನ್ನು ಅವರ ಮುಂದೆ ನಡೆಸುವುದಕ್ಕೆ ಇದು ಕಾರಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬಳಿಕ ಸರ್ವೇಶ್ವರ ಸ್ವಾಮಿ ಮೋಶೆಗೆ: “ಫರೋಹನ ಬಳಿಗೆ ಮತ್ತೆ ಹೋಗು. ನಾನು ಅವನ ಮತ್ತು ಅವನ ಪರಿವಾರದವರ ಹೃದಯಗಳನ್ನು ಮೊಂಡಾಗಿಸಿದ್ದೇನೆ. ಏಕೆಂದರೆ ಈ ಸೂಚಕಕಾರ್ಯಗಳನ್ನು ಅವರ ಮುಂದೆ ನಡೆಸಲು ಆಸ್ಪದವಾಗಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗು. ನಾನು ಅದ್ಭುತಕಾರ್ಯಗಳನ್ನು ತೋರಿಸಲು ಅವಕಾಶವಾಗಲೆಂದು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ತರುವಾಯ ಯೆಹೋವ ದೇವರು ಮೋಶೆಗೆ, “ಫರೋಹನ ಬಳಿಗೆ ಹೋಗು, ಏಕೆಂದರೆ ನಾನು ನನ್ನ ಅದ್ಭುತ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸುವುದಕ್ಕಾಗಿ ಅವನ ಹೃದಯವನ್ನೂ ಅವನ ಅಧಿಕಾರಿಗಳ ಹೃದಯಗಳನ್ನೂ ಕಠಿಣ ಮಾಡಿದ್ದೇನೆ. ಅಧ್ಯಾಯವನ್ನು ನೋಡಿ |