Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:12 - ಕನ್ನಡ ಸತ್ಯವೇದವು J.V. (BSI)

12 ಆಗ ಯೆಹೋವನು ಮೋಶೆಗೆ - ಐಗುಪ್ತದೇಶದ ಮೇಲೆ ನಿನ್ನ ಕೈಚಾಚಿ ವಿುಡಿತೆಗಳನ್ನು ಬರಮಾಡು; ಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ವಿುಡಿತೆಗಳು ತಿಂದುಬಿಡಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಯೆಹೋವನು ಮೋಶೆಗೆ, “ಐಗುಪ್ತ ದೇಶದ ಮೇಲೆ ನಿನ್ನ ಕೈಯನ್ನು ಚಾಚಿ, ಮಿಡತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ಕೈಚಾಚಿ ಮಿಡಿತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ನಿನ್ನ ಕೈಯನ್ನೆತ್ತು. ಆಗ ಮಿಡತೆಗಳು ಬರುವವು! ಮಿಡತೆಗಳು ಈಜಿಪ್ಟ್ ದೇಶದಲ್ಲೆಲ್ಲಾ ಹರಡಿಕೊಳ್ಳುವವು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದುಕೊಂಡ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡುವವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋವ ದೇವರು ಮೋಶೆಗೆ, “ಮಿಡತೆಗಳಿಗಾಗಿ ನಿನ್ನ ಕೈಯನ್ನು ಈಜಿಪ್ಟಿನ ಮೇಲೆ ಚಾಚು. ಅವು ಈಜಿಪ್ಟಿನ ಮೇಲೆ ಬಂದು, ಆಲಿಕಲ್ಲಿನ ಮಳೆಯು ದೇಶದಲ್ಲಿ ಉಳಿಸಿದ ಹಸುರಾದದ್ದನ್ನೆಲ್ಲಾ ತಿಂದುಬಿಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:12
6 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನಿನ್ನ ಕೊಲನ್ನು ತೆಗೆದುಕೊಂಡು ಐಗುಪ್ತ ದೇಶದಲ್ಲಿರುವ ಹೊಳೆ ಕಾಲುವೆ ಕೆರೆ ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು ಎಂದು ಹೇಳಬೇಕು; ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವದು; ಐಗುಪ್ತ ದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರೂ ರಕ್ತವಾಗುವದು ಅಂದನು.


ಹೊಗೆಯೊಳಗಿಂದ ವಿುಡಿತೆಗಳು ಭೂವಿುಯ ಮೇಲೆ ಹೊರಟುಬಂದವು. ಭೂವಿುಯಲ್ಲಿರುವ ಚೇಳುಗಳಿಗೆ ಸಾಮರ್ಥ್ಯವಿರುವ ಪ್ರಕಾರ ಅವುಗಳಿಗೆ ಸಾಮರ್ಥ್ಯ ಕೊಡಲ್ಪಟ್ಟಿತು.


ಅವು ಭೂವಿುಯನ್ನೆಲ್ಲಾ ಮುಚ್ಚಿಕೊಂಡದ್ದರಿಂದ ನೆಲವು ಕಾಣದೆಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ ಅಡವಿಯ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.


ಆತನು ಆಜ್ಞಾಪಿಸಲು ವಿುಡಿತೆಗಳೂ ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು


ಗೋದಿಯೂ ಕಡಲೆಯೂ ಹಿಂದಿನ ಬೆಳೆಯಾದದರಿಂದ ಅದಕ್ಕೆ ನಷ್ಟವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು