Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:13 - ಕನ್ನಡ ಸತ್ಯವೇದವು J.V. (BSI)

13 ಮೋಶೆ ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಯೆಹೋವನು ಆ ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸಮಾಡಿದನು. ಹೊತ್ತಾರೆ ಆ ಗಾಳಿಯ ದೆಸೆಯಿಂದ ವಿುಡಿತೆಗಳು ಬಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೋಶೆ ತನ್ನ ಕೋಲನ್ನು ಐಗುಪ್ತ ದೇಶದ ಮೇಲೆ ಚಾಚಿದಾಗ, ಯೆಹೋವನು ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸುವಂತೆ ಮಾಡಿದನು. ಹೊತ್ತಾರೆ ಗಾಳಿಯ ದೆಸೆಯಿಂದ ಮಿಡತೆಗಳು ಬಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂತೆಯೇ ಮೋಶೆ ತನ್ನ ಕೋಲನ್ನು ಈಜಿಪ್ಟ್ ದೇಶದ ಮೇಲೆ ಚಾಚಿದನು. ಸರ್ವೇಶ್ವರ ಹಗಲಿರುಳು ಪೂರ್ವದಿಕ್ಕಿನಿಂದ ಗಾಳಿ ಬೀಸುವಂತೆ ಮಾಡಿದರು. ಆ ಗಾಳಿಯಿಂದಾಗಿ ಮುಂಜಾನೆಯಲ್ಲೇ ಮಿಡತೆಗಳು ಬಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಂತೆಯೇ ಮೋಶೆ ಈಜಿಪ್ಟ್ ದೇಶದ ಮೇಲೆ ಕೈ ಚಾಚಿದನು. ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಗಾಳಿಯು ಹಗಲಿರುಳು ಬೀಸಿತು. ಮುಂಜಾನೆಯಾದಾಗ ಆ ಗಾಳಿಯಿಂದ ಈಜಿಪ್ಟ್ ದೇಶಕ್ಕೆ ಮಿಡತೆಗಳು ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮೋಶೆಯು ತನ್ನ ಕೋಲನ್ನು ಈಜಿಪ್ಟ್ ದೇಶದ ಮೇಲೆ ಚಾಚಿದಾಗ, ಯೆಹೋವ ದೇವರು ಹಗಲಲ್ಲೂ ರಾತ್ರಿಯಲ್ಲೂ ಪೂರ್ವದಿಕ್ಕಿನಿಂದ ಗಾಳಿಯನ್ನು ಬರಮಾಡಿದರು. ಉದಯವಾದಾಗ ಆ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:13
11 ತಿಳಿವುಗಳ ಹೋಲಿಕೆ  

ಆ ಜನರು ಬೆರಗಾಗಿ - ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಅಂದರು.


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ಬಳಿಕ ಯೆಹೋವನು ಬಿರುಗಾಳಿಯನ್ನು ಸಮುದ್ರದ ಮೇಲೆ ಬಲವಾಗಿ ಬೀಸಲು ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.


ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳೂ ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯೂ


ಆತನು ಆಜ್ಞಾಪಿಸಲು ವಿುಡಿತೆಗಳೂ ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು


ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನುಂಟುಮಾಡಿ ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು


ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ವಿಭಾಗವಾಯಿತು.


ಅವುಗಳ ಹಿಂದೆ ಮೂಡಣ ಗಾಳಿಯಿಂದ ಕೆಟ್ಟು ಬತ್ತಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು;


ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಕಷ್ಟಫಲವನ್ನು ವಿುಡಿತೆಗಳಿಗೂ ಕೊಟ್ಟುಬಿಟ್ಟನು.


ವಿುಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು