ವಿಮೋಚನಕಾಂಡ 10:24 - ಕನ್ನಡ ಸತ್ಯವೇದವು J.V. (BSI)24 ಆಗ ಫರೋಹನು ಮೋಶೆಯನ್ನು ಕರಸಿ - ನೀವು ಹೋಗಿ ಯೆಹೋವನಿಗೆ ಆರಾಧನೆ ಮಾಡಿ ಬರಬಹುದು; ನಿಮ್ಮ ಮನೆಗಳಿಗೆ ಸೇರಿದವರೂ ಹೋಗಬಹುದು; ನಿಮ್ಮ ಕುರಿದನಗಳನ್ನು ಮಾತ್ರ ಇಲ್ಲೇ ಬಿಟ್ಟುಹೋಗಬೇಕು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಫರೋಹನು ಮೋಶೆಯನ್ನು ಕರೆಯಿಸಿ ಅವನಿಗೆ, “ನೀವು ಹೋಗಿ ಯೆಹೋವನಿಗೆ ಆರಾಧನೆ ಮಾಡಿ ಬರಬಹುದು. ನಿಮ್ಮ ಮನೆಗಳಿಗೆ ಸೇರಿದವರೂ ಹೋಗಬಹುದು. ನಿಮ್ಮ ಕುರಿದನಗಳನ್ನು ಮಾತ್ರ ಇಲ್ಲೇ ಬಿಟ್ಟುಹೋಗಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಫರೋಹನು ಮೋಶೆಯನ್ನು ಕರೆಯಿಸಿ, “ನೀವು ಹೋಗಿ ಸರ್ವೇಶ್ವರನಿಗೆ ಆರಾಧನೆ ಮಾಡಿಬರಬಹುದು; ನಿಮ್ಮ ಮಡದಿ ಮಕ್ಕಳೂ ಹೋಗಿಬರಬಹುದು; ನಿಮ್ಮ ದನಕುರಿಗಳನ್ನು ಮಾತ್ರ ಇಲ್ಲೇ ಬಿಟ್ಟು ಹೋಗಬೇಕು,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಫರೋಹನು ಮತ್ತೆ ಮೋಶೆಯನ್ನು ಕರೆಸಿ, “ಹೋಗಿ, ಯೆಹೋವನನ್ನು ಆರಾಧಿಸಿರಿ! ನೀವು ನಿಮ್ಮ ಮಕ್ಕಳನ್ನು ಕರೆದುಕೊಂಡು ಹೋಗಬಹುದು. ಆದರೆ ನೀವು ನಿಮ್ಮ ಕುರಿಗಳನ್ನು ದನಕರುಗಳನ್ನು ಇಲ್ಲಿಯೇ ಬಿಟ್ಟುಹೋಗಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಫರೋಹನು ಮೋಶೆಯನ್ನು ಕರೆಯಿಸಿ ಅವನಿಗೆ, “ನೀವು ಹೋಗಿ ಯೆಹೋವ ದೇವರಿಗೆ ಆರಾಧನೆ ಮಾಡಿರಿ. ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಡದಿ ಮಕ್ಕಳೂ ನಿಮ್ಮ ಸಂಗಡ ಹೋಗಲಿ,” ಎಂದನು. ಅಧ್ಯಾಯವನ್ನು ನೋಡಿ |