Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:4 - ಕನ್ನಡ ಸತ್ಯವೇದವು J.V. (BSI)

4 ಅಪ್ಪಣೆ ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಕ್ಕೆ ವಿುಡಿತೆಗಳನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಪ್ಪಣೆಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ನನ್ನ ಜನರನ್ನು ಕಳುಹಿಸಿಕೊಡದಿದ್ದರೆ, ನಾಳೆಯೇ ನಿನ್ನ ದೇಶದೊಳಗೆ ಮಿಡತೆಗಳನ್ನು ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ನಾಳೆಯೇ ನಾನು ನಿನ್ನ ರಾಜ್ಯದಲ್ಲಿ ಮಿಡತೆಗಳನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:4
15 ತಿಳಿವುಗಳ ಹೋಲಿಕೆ  

ಹೊಗೆಯೊಳಗಿಂದ ವಿುಡಿತೆಗಳು ಭೂವಿುಯ ಮೇಲೆ ಹೊರಟುಬಂದವು. ಭೂವಿುಯಲ್ಲಿರುವ ಚೇಳುಗಳಿಗೆ ಸಾಮರ್ಥ್ಯವಿರುವ ಪ್ರಕಾರ ಅವುಗಳಿಗೆ ಸಾಮರ್ಥ್ಯ ಕೊಡಲ್ಪಟ್ಟಿತು.


ಗುಂಪುವಿುಡತೆ, ಸಣ್ಣವಿುಡತೆ, ದೊಡ್ಡವಿುಡತೆ, ಚೂರಿವಿುಡತೆ, ಅಂತು ನಾನು ನಿಮ್ಮ ಮೇಲೆ ಕಳುಹಿಸಿದ ನನ್ನ ದೊಡ್ಡ ದಂಡು ತಿಂದುಬಿಟ್ಟ ವರುಷಗಳನ್ನು ನಾನು ನಿಮಗೆ ಕಟ್ಟಿಕೊಡುವೆನು.


ವಿುಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.


ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು; ಐಗುಪ್ತರಾಜ್ಯವು ಸ್ಥಾಪಿಸಲ್ಪಟ್ಟ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿಲ್ಲ.


ಇದಲ್ಲದೆ ಯೆಹೋವನು ಕಾಲವನ್ನು ನಿರ್ಣಯಿಸಿ - ನಾಳೆಯೇ ಈ ಕಾರ್ಯವನ್ನು ನಡಿಸುವೆನು ಎಂದು ಹೇಳಿದನು.


ನನ್ನ ಜನಕ್ಕೂ ನಿನ್ನ ಜನಕ್ಕೂ ವ್ಯತ್ಯಾಸ ಮಾಡುವೆನು. ನಾಳೆಯೇ ಈ ಮಹತ್ಕಾರ್ಯವುಂಟಾಗುವದು ಅನ್ನಬೇಕೆಂದು ಹೇಳಿದನು.


ಅದಕ್ಕೆ ಮೋಶೆ - ನಿನ್ನ ಮಾತಿನ ಪ್ರಕಾರವೇ ಆಗುವದು;


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಅವು ಭೂವಿುಯನ್ನೆಲ್ಲಾ ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದದ್ದೆಲ್ಲವನ್ನು ವಿುಡಿತೆಗಳು ತಿಂದುಬಿಡುವವು; ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆಚಿಗುರುಗಳನ್ನೂ ತಿಂದು ಬಿಡುವವು.


ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ವಿುಡತೆಯ ದಂಡು ಬಂದು ಅದನ್ನು ತಿಂದು ಬಿಡುವದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವದು;


ಅದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆಂದು ತಿಳಿಸಬೇಕು.


ಬಳಿಕ ಮೋಶೆ ಆರೋನರು ಫರೋಹನ ಸನ್ನಿಧಿಗೆ ಹೋಗಿ - ಇಸ್ರಾಯೇಲ್ಯರ ದೇವರಾದ ಯೆಹೋವನು - ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡಿಸುವಂತೆ ಅವರಿಗೆ ಅಪ್ಪಣೆ ಕೊಡಬೇಕೆಂದು ಹೇಳಿದ್ದಾನೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು