ವಿಮೋಚನಕಾಂಡ 10:6 - ಕನ್ನಡ ಸತ್ಯವೇದವು J.V. (BSI)6 ಅವು ನಿನ್ನ ಮನೆಗಳಲ್ಲಿಯೂ ನಿನ್ನ ಪರಿವಾರದವರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ತಂದೆತಾತಂದಿರು ಹುಟ್ಟಿದಂದಿನಿಂದ ಇಂದಿನವರೆಗೂ ಅಂಥ ವಿುಡಿತೇ ದಂಡನ್ನು ಎಂದೂ ನೋಡಿಲ್ಲ ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವು ನಿನ್ನ ಮನೆಗಳಲ್ಲಿಯೂ, ನಿನ್ನ ಪರಿವಾರದವರ ಮನೆಗಳಲ್ಲಿಯೂ, ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಎಂದೂ ಅವರು ನೋಡಿರುವುದಿಲ್ಲ’” ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನ್ನ ಮನೆಗಳಲ್ಲೂ ನಿನ್ನ ಪರಿವಾರದವರ ಮನೆಗಳಲ್ಲೂ ಈಜಿಪ್ಟಿನವರ ಮನೆಗಳಲ್ಲೂ ಅವು ತುಂಬಿಕೊಳ್ಳುವುವು. ನಿಮ್ಮ ತಂದೆ ತಾತಂದಿರ ಕಾಲದಿಂದ ಇಂದಿನವರೆಗೂ ಅಂಥ ಮಿಡಿತೆದಂಡನ್ನು ಯಾರೂ ನೋಡಿಲ್ಲ.” ಹೀಗೆಂದು ಹೇಳಿ ಮೋಶೆ ಫರೋಹನ ಬಳಿಯಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿರುತ್ತವೆ. ನಿನ್ನ ತಂದೆತಾತಂದಿರೂ ನೋಡಿಲ್ಲದಷ್ಟು ಮಿಡತೆಗಳಿರುತ್ತವೆ’” ಎಂದು ಹೇಳಿದರು. ಬಳಿಕ ಅವರು ಫರೋಹನ ಬಳಿಯಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿಕೊಳ್ಳುವುವು. ನಿನ್ನ ತಂದೆ ಅಲ್ಲದೆ ನಿನ್ನ ತಂದೆಯ ತಂದೆಗಳಾಗಲಿ, ಭೂಮಿಯ ಮೇಲೆ ಇದ್ದಂದಿನಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಯಾರೂ ನೋಡಿಲ್ಲ,’ ” ಎಂದು ಮೋಶೆ ಹೇಳಿ ಫರೋಹನ ಬಳಿಯಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿ |