Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:7 - ಕನ್ನಡ ಸತ್ಯವೇದವು J.V. (BSI)

7 ಆಗ ಫರೋಹನ ಪರಿವಾರದವರು ಅವನಿಗೆ - ಈ ಮನುಷ್ಯನು ಇನ್ನು ಎಷ್ಟು ದಿವಸ ನಮಗೆ ಉರುಲಾಗಿರಬೇಕು? ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವದಕ್ಕೆ ಅಪ್ಪಣೆಕೊಡು. ಐಗುಪ್ತದೇಶವು ಹಾಳಾಯಿತೆಂದು ಇನ್ನೂ ನಿನ್ನ ಮನಸ್ಸಿಗೆ ಬರಲಿಲ್ಲವೋ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಫರೋಹನ ಪರಿವಾರದವರು ಅವನಿಗೆ, “ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಐಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಪರಿವಾರದವರು ಫರೋಹನಿಗೆ, “ಈ ಮನುಷ್ಯ ಇನ್ನೆಷ್ಟುಕಾಲ ನಮಗೆ ಉರುಳಾಗಿರುವನೋ! ಆ ಜನರು ಹೋಗಿ ತಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಲು ಅಪ್ಪಣೆಕೊಟ್ಟುಬಿಡಿ. ಈಜಿಪ್ಟ್ ದೇಶವೇ ಹಾಳಾಗುತ್ತಿದೆಯೆಂದು ತಮ್ಮ ಮನಸ್ಸಿಗೆ ತೋಚಿರಬೇಕಲ್ಲವೆ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಫರೋಹನ ಅಧಿಕಾರಿಗಳು ಅವನಿಗೆ, “ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವಂತೆ ಅವರನ್ನು ಕಳುಹಿಸಿಬಿಡು. ಈಜಿಪ್ಟ್ ನಾಶವಾಯಿತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:7
16 ತಿಳಿವುಗಳ ಹೋಲಿಕೆ  

ಸೌಲನು - ದಾವೀದನಿಗೆ ಉರಲಾಗಿರುವಂತೆಯೂ ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ - ನೀನು ನನ್ನ ಅಳಿಯನಾಗುವದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು ಎಂದು ಹೇಳಿದನು.


ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣುಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ಇಲ್ಲದಂತಾಗುವಿರಿ.


ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು; ವಾಸವಾಗಿದ್ದರೆ ನನಗೆ ವಿರೋಧವಾಗಿ ನಿಮ್ಮಲ್ಲಿ ದ್ರೋಹಬುದ್ಧಿಯನ್ನು ಹುಟ್ಟಿಸಾರು; ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವದು.


ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ. ನಾನು ನಿಮಗೆ ಉರ್ಲು ಹಾಕಬೇಕೆಂದು ಇದನ್ನು ಹೇಳುವದಿಲ್ಲ, ನೀವು ಸಜ್ಜನರಿಗೆ ತಕ್ಕ ಹಾಗೆ ನಡೆದು ಭಿನ್ನಭಾವವಿಲ್ಲದೆ ಕರ್ತನಿಗೆ ಪಾದಸೇವೆಯನ್ನು ಮಾಡುವವರಾಗಬೇಕೆಂದು ನಿಮ್ಮ ಹಿತಕ್ಕೋಸ್ಕರವೇ ಹೇಳುತ್ತೇನೆ.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಅರಿಚಿರಿ; ಅದರ ನೋವನ್ನು ನೀಗಿಸುವದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕೆಟ್ಟವರು ಮೊರೆಯಿಟ್ಟಿದ್ದಾರೆ.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ನೀನು ಆ ರಾಜರಂತೆ ಗೋರಿಗೆ ಸೇರುವದಿಲ್ಲ; ನಿನ್ನ ಪ್ರಜೆಯನ್ನು ಕೊಂದು ನಿನ್ನ ದೇಶವನ್ನು ಹಾಳುಮಾಡಿದ್ದೀ, ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಿರುವದಲ್ಲವೆ.


ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು; ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.


ಬುಗ್ಗೆಗಳನ್ನು ಒಣನೆಲವಾಗುವಂತೆಯೂ ಫಲಭೂವಿುಯನ್ನು ಉಪ್ಪುನೆಲವಾಗುವಂತೆಯೂ ಮಾಡಿದನು.


ಆಗ ಆ ಜೋಯಿಸರು - ಇದು ದೇವರ ಕೈಕೆಲಸವೇ ಸರಿ ಎಂದು ಫರೋಹನಿಗೆ ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು; ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.


ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲ್ಯರನ್ನು ಹೊರತಂದಾಗ ನಾನು ಯೆಹೋವನೆಂಬದನ್ನು ಐಗುಪ್ತ್ಯರು ತಿಳಿದುಕೊಳ್ಳುವರು ಅಂದನು.


ಐಗುಪ್ತ್ಯರು - ನಾವೆಲ್ಲರು ಸಾಯುತ್ತೇವಲ್ಲಾ ಅಂದುಕೊಂಡು ಇಸ್ರಾಯೇಲ್ಯರನ್ನು ತಮ್ಮ ದೇಶದಿಂದ ತ್ವರೆಯಾಗಿ ಕಳುಹಿಸಿಬಿಡುವದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲಾತ್ಕರಿಸಿದರು.


ದೇವರ ಹಸ್ತವು ಅವರಿಗೂ ಬಾಧಕವಾಗಿದ್ದದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ - ಇಸ್ರಾಯೇಲ್‍ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು