Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:8 - ಕನ್ನಡ ಸತ್ಯವೇದವು J.V. (BSI)

8 ಅದನ್ನು ಕೇಳಿ ಫರೋಹನು ಮೋಶೆ ಆರೋನರನ್ನು ತಿರಿಗಿ ಕರಿಸಿ ಅವರಿಗೆ - ನೀವು ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿ ಬರಬಹುದು; ಆದರೆ ಯಾರಾರು ಹೋಗಬೇಕನ್ನುತ್ತೀರಿ ಎಂದು ಕೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದನ್ನು ಕೇಳಿ ಫರೋಹನು, ಮೋಶೆ ಮತ್ತು ಆರೋನರನ್ನು ತಿರುಗಿ ಕರೆಯಿಸಿ ಅವರಿಗೆ, “ನೀವು ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಹುದು. ಆದರೆ ಯಾರಾರು ಹೋಗಬೇಕನ್ನುತ್ತೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದನ್ನು ಕೇಳಿದ ಫರೋಹನು ಮೋಶೆ ಮತ್ತು ಆರೋನರನ್ನು ಪುನಃ ಕರೆಸಿ, “ನೀವು ಹೋಗಿ ನಿಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಬಹುದು. ಆದರೆ ಯಾರ್ಯಾರು ಹೋಗಬೇಕೆನ್ನುತ್ತೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ಫರೋಹನು ಮೋಶೆ ಆರೋನರನ್ನು ತನ್ನ ಬಳಿಗೆ ಕರೆಯಿಸಿ, “ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ. ಆದರೆ ಹೋಗುವವರು ಯಾರೆಂಬುದನ್ನು ನನಗೆ ತಿಳಿಸಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದುದರಿಂದ ಫರೋಹನು ಮೋಶೆ ಮತ್ತು ಆರೋನರನ್ನು ಪುನಃ ಕರೆಯಿಸಿ ಅವರಿಗೆ, “ನೀವು ಹೋಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಿರಿ, ಆದರೆ ಹೋಗುವವರು ಯಾರ‍್ಯಾರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:8
6 ತಿಳಿವುಗಳ ಹೋಲಿಕೆ  

ಆಗ ಫರೋಹನು ಮೋಶೆಯನ್ನು ಕರಸಿ - ನೀವು ಹೋಗಿ ಯೆಹೋವನಿಗೆ ಆರಾಧನೆ ಮಾಡಿ ಬರಬಹುದು; ನಿಮ್ಮ ಮನೆಗಳಿಗೆ ಸೇರಿದವರೂ ಹೋಗಬಹುದು; ನಿಮ್ಮ ಕುರಿದನಗಳನ್ನು ಮಾತ್ರ ಇಲ್ಲೇ ಬಿಟ್ಟುಹೋಗಬೇಕು ಅಂದನು.


ಫರೋಹನು ಆ ರಾತ್ರಿಯಲ್ಲೇ ಮೋಶೆ ಆರೋನರನ್ನು ಕರಿಸಿ - ನೀವೂ ಇಸ್ರಾಯೇಲ್ಯರೆಲ್ಲರೂ ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ; ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸಿರಿ.


ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರಿಸಿ - ನಾನು ನಿಮ್ಮ ದೇವರಾದ ಯೆಹೋವನಿಗೂ ನಿಮಗೂ ಪಾಪಮಾಡಿದ್ದೇನೆ;


ಆಗ ಫರೋಹನು ಮೋಶೆ ಆರೋನರನ್ನು ಕರಿಸಿ - ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು; ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.


ಆಗ ಫರೋಹನು ಮೋಶೆ ಆರೋನರನ್ನು ಕರಿಸಿ - ನೀವು ಹೋಗಿ ಈ ದೇಶದೊಳಗೇ ನಿಮ್ಮ ದೇವರಿಗೆ ಯಜ್ಞ ಮಾಡಬಹುದು ಅಂದನು.


ಈ ಭಯಂಕರವಾದ ಗುಡುಗೂ ಕಲ್ಲಿನ ಮಳೆಯೂ ಬಹು ಹೆಚ್ಚಾದವು. ಇವುಗಳನ್ನು ನಿಲ್ಲಿಸುವದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ದೇಶವನ್ನು ಬಿಟ್ಟು ಹೊರಡುವದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ, ನಿಮ್ಮನ್ನು ತಡೆಯುವದಿಲ್ಲ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು