ವಿಮೋಚನಕಾಂಡ 11:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನು ಮೋಶೆಗೆ ಇಂತೆಂದನು - ಫರೋಹನಿಗೂ ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ; ಅದು ಬಂದ ನಂತರ ಅವನು ನಿಮಗೆ ಇಲ್ಲಿಂದ ಹೋಗುವದಕ್ಕೆ ಅಪ್ಪಣೆಕೊಡುವದು ಮಾತ್ರವಲ್ಲದೆ ನಿಮ್ಮೆಲ್ಲರನ್ನು ಅಟ್ಟಿಬಿಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮೋಶೆಗೆ, “ಫರೋಹನಿಗೂ ಮತ್ತು ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತ್ರವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಎಂದರು: “ಫರೋಹನಿಗೂ ಈಜಿಪ್ಟಿನವರಿಗೂ ಇನ್ನೊಂದು ಪಿಡುಗನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆಕೊಡುವನು. ಅದು ಮಾತ್ರವಲ್ಲ, ನಿಮ್ಮೆಲ್ಲರನ್ನು ಅಲ್ಲಿಂದ ಅಟ್ಟಿಬಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬಳಿಕ ಯೆಹೋವನು ಮೋಶೆಗೆ, “ನಾನು ಫರೋಹನಿಗೂ ಈಜಿಪ್ಟಿಗೂ ಮತ್ತೊಂದು ವಿಪತ್ತನ್ನು ಬರಮಾಡುತ್ತೇನೆ. ಆಗ ಅವನು ನಿಮ್ಮನ್ನು ಈಜಿಪ್ಟಿನಿಂದ ಕಳುಹಿಸುವನು; ನಿಮ್ಮನ್ನು ಬಲವಂತದಿಂದ ಕಳುಹಿಸಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಮೋಶೆಗೆ, “ಇನ್ನು ಒಂದೇ ಉಪದ್ರವವನ್ನು ಫರೋಹನ ಮೇಲೆಯೂ, ಈಜಿಪ್ಟ್ ಮೇಲೆಯೂ ಬರಮಾಡುವೆನು. ಆಮೇಲೆ ಅವನು ಇಲ್ಲಿಂದ ಕಳುಹಿಸುವನು. ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲರನ್ನೂ ಕಳುಹಿಸಿಬಿಡುವನು. ಅಧ್ಯಾಯವನ್ನು ನೋಡಿ |