ವಿಮೋಚನಕಾಂಡ 11:3 - ಕನ್ನಡ ಸತ್ಯವೇದವು J.V. (BSI)3 ಯೆಹೋವನು ಇಸ್ರಾಯೇಲ್ಯರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಆ ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಈಜಿಪ್ಟಿನವರಿಗೆ ಇಸ್ರಯೇಲರ ಮೇಲೆ ಕನಿಕರ ಉಂಟಾಗುವಂತೆ ಮಾಡಿದರು ಸರ್ವೇಶ್ವರ. ಇದಲ್ಲದೆ ಈಜಿಪ್ಟ್ ದೇಶದ ಫರೋಹನ ಪರಿವಾರದವರು ಮೋಶೆಯನ್ನು ಮಹಾಪುರುಷನೆಂದು ಭಾವಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈಜಿಪ್ಟಿನವರು ನಿಮಗೆ ದಯೆತೋರುವಂತೆ ಯೆಹೋವನು ಅವರನ್ನು ಪ್ರೇರೇಪಿಸುವನು. ಈಜಿಪ್ಟಿನ ಜನರು ಮತ್ತು ಫರೋಹನ ಅಧಿಕಾರಿಗಳು ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರ ದೃಷ್ಟಿಯಲ್ಲಿ ಜನರಿಗೆ ದಯೆ ದೊರಕುವಂತೆ ಮಾಡಿದರು. ಇದಲ್ಲದೆ ಮೋಶೆಯು ಈಜಿಪ್ಟ್ ದೇಶದಲ್ಲಿಯೂ ಫರೋಹನ ಅಧಿಕಾರಿಗಳ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹಳ ಗೌರವ ಹೊಂದಿದನು. ಅಧ್ಯಾಯವನ್ನು ನೋಡಿ |