Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 11:5 - ಕನ್ನಡ ಸತ್ಯವೇದವು J.V. (BSI)

5 ಆಗ ಸಿಂಹಾಸನದ ಮೇಲೆ ಕೂತಿರುವ ಫರೋಹನ ಚೊಚ್ಚಲುಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಕೂತಿರುವ ದಾಸಿಯ ಚೊಚ್ಚಲುಮಗನವರೆಗೂ ಐಗುಪ್ತದೇಶದಲ್ಲಿ ಚೊಚ್ಚಲುಮಕ್ಕಳೆಲ್ಲರೂ ಸಾಯುವರು; ಪಶುಗಳಲ್ಲೂ ಚೊಚ್ಚಲಾದವುಗಳೆಲ್ಲಾ ಸಾಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ, ಸಿಂಹಾಸನಾರೂಢನಾದ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಬೀಸುಕಲ್ಲನ್ನು ಹಿಡಿದು ಕೂತಿರುವ ದಾಸಿಯ ಚೊಚ್ಚಲು ಮಗನವರೆಗೂ ಈಜಿಪ್ಟ್ ದೇಶದಲ್ಲಿ ಚೊಚ್ಚಲು ಮಕ್ಕಳೆಲ್ಲರು ಸಾಯುವರು. ಪಶುಪ್ರಾಣಿಗಳಲ್ಲೂ ಚೊಚ್ಚಲಾದವುಗಳೆಲ್ಲಾ ಸಾಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಜಿಪ್ಟಿನ ಚೊಚ್ಚಲು ಮಕ್ಕಳೆಲ್ಲರೂ ಅಂದರೆ ಫರೋಹನ ಚೊಚ್ಚಲು ಮಗನಿಂದಿಡಿದು ಧಾನ್ಯವನ್ನು ಬೀಸುವ ಸೇವಕಿಯ ಚೊಚ್ಚಲು ಮಗನವರೆಗೂ ಇರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಇದಲ್ಲದೆ ಚೊಚ್ಚಲು ಪಶುಗಳೂ ಸಾಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಈಜಿಪ್ಟ್ ದೇಶದ ಚೊಚ್ಚಲ ಮಕ್ಕಳು ಅಂದರೆ, ಸಿಂಹಾಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲನ್ನು ಹಿಡಿದಿರುವ ದಾಸಿಯ ಚೊಚ್ಚಲ ಮಗನವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವೂ ಸಾಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 11:5
13 ತಿಳಿವುಗಳ ಹೋಲಿಕೆ  

ಹಾಮನ ಮನೆತನದವರ ವೀರ್ಯಕ್ಕೆ ಪ್ರಥಮ ಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.


ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕೂತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಒಬ್ಬಳು ಬಿಡಲ್ಪಡುವಳು.


ಆತನು ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು; ಆತನ ಕೃಪೆಯು ಶಾಶ್ವತವಾದದ್ದು.


ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.


ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ ಚೊಚ್ಚಲ ಮಕ್ಕಳನ್ನು ಸಂಹರಿಸಿದನು.


ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿದ್ದ ಮನುಷ್ಯರ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲುಮರಿಗಳನ್ನೂ ಅಂತೂ ಆ ದೇಶದ ಚೊಚ್ಚಲಾಗಿದ್ದದ್ದನ್ನೆಲ್ಲಾ ಸಂಹಾರ ಮಾಡಿದನು. ಆದಕಾರಣ ಗಂಡಾದ ಪ್ರಥಮ ಗರ್ಭವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವದುಂಟು; ಮನುಷ್ಯರಿಂದಾದ ಪ್ರಥಮಗರ್ಭವನ್ನಾದರೋ ಬದಲು ಕೊಟ್ಟು ಬಿಡಿಸುತ್ತೇವೆ ಎಂದು ಹೇಳಬೇಕು.


ಅರ್ಧರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಬಂದಿವಾನನ ಚೊಚ್ಚಲು ಮಗನವರೆಗೂ ಐಗುಪ್ತದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರ ಮಾಡಿದನು.


ಆ ರಾತ್ರಿ ನಾನು ಐಗುಪ್ತ ದೇಶದ ನಡುವೆ ಹಾದುಹೋಗಿ ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಚೊಚ್ಚಲಾಗಿರುವದನ್ನೆಲ್ಲಾ ಸಂಹರಿಸುವೆನು; ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ಶಿಕ್ಷೆಮಾಡುವೆನು; ನಾನು ಯೆಹೋವನು.


ಅದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆಂದು ತಿಳಿಸಬೇಕು.


ಚೊಚ್ಚಲಮಕ್ಕಳನ್ನು ಸಂಹರಿಸುವವನು ಇಸ್ರಾಯೇಲ್ಯರನ್ನು ಮುಟ್ಟದಂತೆ ಅವನು ಪಸ್ಕವೆಂಬ ಊಟವನ್ನೂ ರಕ್ತಪ್ರೋಕ್ಷಣಾಚಾರವನ್ನೂ ನೇವಿುಸಿದ್ದು ನಂಬಿಕೆಯಿಂದಲೇ.


ಯುವಕಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು, ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು.


ಬೀಸುವ ಕಲ್ಲನ್ನು ಹಿಡಿದು ಹಿಟ್ಟು ಬೀಸು, ಮುಸುಕನ್ನು ತೆಗೆದುಹಾಕಿ ಈಜಾಡುವ ನೆರಿಗೆಯನ್ನು ಹರಿದುಬಿಟ್ಟು ಬೆತ್ತಲೆಕಾಲಾಗಿ ಹೊಳೆಗಳನ್ನು ಹಾದುಹೋಗು.


ಫಿಲಿಷ್ಟಿಯರು ಅವನನ್ನು ಹಿಡಿದು ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಕಬ್ಬಿಣದ ಬೇಡಿಗಳನ್ನು ಹಾಕಿ ಸೆರೆಮನೆಯಲ್ಲಿ ಬೀಸುವದಕ್ಕೆ ಹಚ್ಚಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು