Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 11:8 - ಕನ್ನಡ ಸತ್ಯವೇದವು J.V. (BSI)

8 ಆಗ ನಿನ್ನ ಪರಿವಾರದವರಾದ ಇವರೆಲ್ಲರೂ ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡುವರು; ಆಮೇಲೆ ನಾನು ಹೊರಟುಹೋಗುವೆನು ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ನಿನ್ನ ಪರಿವಾರದವರಾದ ಇವರೆಲ್ಲರು ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀವೂ ನಿಮ್ಮ ಅಧೀನದಲ್ಲಿರುವ ಜನರೆಲ್ಲರು ನಮ್ಮನ್ನು ಬಿಟ್ಟು ಹೋಗಿಬಿಡಿ - ಎಂದು ಬೇಡುವರು. ಇದಾದ ಮೇಲೆ ನಾನು ಹೊರಟುಹೋಗುವೆನು.’ ಈ ಮಾತುಗಳನ್ನು ಹೇಳಿ ಮೋಶೆ ಕೋಪದಿಂದ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು.’ ಅವರು, ‘ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ’ ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು, ನನಗೆ ಅಡ್ಡಬಿದ್ದು, ನನಗೆ ನೀನೂ, ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ, ‘ಹೊರಗೆ ಹೋಗಿರಿ,’ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು,” ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 11:8
18 ತಿಳಿವುಗಳ ಹೋಲಿಕೆ  

ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ಕಡೆಗೆ ಬೇರೆಮಾಡಿಕೊಂಡು ಆವಿಗೆಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ದಂಡಿಸಬೇಡ.


ಆಗ ಇಸ್ರಾಯೇಲ್ ಯೆಹೂದ ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದ ಪಶುಗಳಿಗೂ ನೀರು ಸಿಕ್ಕದೆಹೋದದರಿಂದ ಇಸ್ರಾಯೇಲ್ಯರ ಅರಸನು -


ದೂತರು ಬಂದು ಈ ಮಾತುಗಳನ್ನು ಬೆನ್ಹದದನಿಗೆ ತಿಳಿಸಿದಾಗ ಅವನು ಅಹಾಬನಿಗೆ - ಸಮಾರ್ಯಪಟ್ಟಣದ ನಾಶನದಿಂದುಂಟಾಗುವ ಧೂಳು ಲೆಕ್ಕವಿಲ್ಲದ ನನ್ನ ಸೈನಿಕರ ಹಿಡಿತುಂಬವಷ್ಟಿದ್ದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದನು.


ಗಿದ್ಯೋನನು ಸುಖೋತಿನವರಿಗೆ - ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ವಿುದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ ಅಂದನು.


ಮತ್ತು ಬಾರಾಕನು ಜೆಬೂಲೂನ್ಯರನ್ನೂ ನಫ್ತಾಲ್ಯರನ್ನೂ ಕೆದೆಷಿಗೆ ಕರಿಸಿದನು; ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು; ದೆಬೋರಳೂ ಹೋದಳು.


ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟಮೃಗಗಳನ್ನೂ ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.


ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು? ಎಂಬದಾಗಿ ವಿಚಾರಿಸುವರು.


ಆ ಮೋಶೆ ಭೂವಿುಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹುಸಾತ್ವಿಕನು.


ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತದೇಶವನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.


ಅದಕ್ಕೆ ಮೋಶೆ - ಅಪ್ಪಣೆ; ಇನ್ನು ಮುಂದೆ ನಾನು ಸಮ್ಮುಖಕ್ಕೆ ಬರುವದೇ ಇಲ್ಲ ಅಂದನು.


ಅವರ ಬೊಬ್ಬೆಯನ್ನೂ ಮಾತುಗಳನ್ನೂ ಕೇಳಿದಾಗ ನನಗೆ ಬಲು ಸಿಟ್ಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು