ವಿಮೋಚನಕಾಂಡ 11:9 - ಕನ್ನಡ ಸತ್ಯವೇದವು J.V. (BSI)9 ಯೆಹೋವನು ಮೋಶೆಗೆ - ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲವಾದದರಿಂದ ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನು ಹೆಚ್ಚಾಗಿ ನಡಿಸುವದಕ್ಕೆ ನನಗೆ ಆಸ್ಪದವಾಗುವದೆಂಬದಾಗಿ ಹೇಳಿದ್ದನಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ಮೋಶೆಗೆ, “ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವೇಶ್ವರ ಮೋಶೆಗೆ, “ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ; ಆದ್ದರಿಂದ ಈಜಿಪ್ಟ್ ದೇಶದಲ್ಲಿ ಸೂಚಕಕಾರ್ಯಗಳನ್ನು ಹೆಚ್ಚಾಗಿ ನಡೆಸಲು ಆಸ್ಪದ ದೊರಕುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಳಿಕ ಯೆಹೋವನು ಮೋಶೆಗೆ, “ಫರೋಹನು ನಿನ್ನ ಮಾತಿಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಾನು ನನ್ನ ಮಹಾಶಕ್ತಿಯನ್ನು ಈಜಿಪ್ಟಿನಲ್ಲಿ ತೋರಿಸಬೇಕಾಗಿದೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಯೆಹೋವ ದೇವರು ಮೋಶೆಗೆ, “ನನ್ನ ಅದ್ಭುತಗಳು ಈಜಿಪ್ಟ್ ದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |