Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:14 - ಕನ್ನಡ ಸತ್ಯವೇದವು J.V. (BSI)

14 ಆ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು. ಅದರಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಮಾಡಬೇಕು. ಅದನ್ನು ಶಾಶ್ವತನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:14
29 ತಿಳಿವುಗಳ ಹೋಲಿಕೆ  

ಅನಂತರ ಅರಸನು ಎಲ್ಲಾ ಜನರಿಗೆ - ಈ ನಿಬಂಧನಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸಬೇಕು ಎಂದು ಆಜ್ಞಾಪಿಸಿದನು.


ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವೆಂದು ಆಚರಿಸಬೇಕು.


ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು; ಇದು ಶಾಶ್ವತವಾದ ನಿಯಮ.


ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನಂದರೆ - ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗಂದರೆ - ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.


ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವದೋ ಅಲ್ಲಲ್ಲಿ ಈಕೆ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ ಹೇಳುವರೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಎಂದು ಹೇಳಿದನು.


ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲ್ಪಡುತ್ತೀ.


ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ದಯೆಯೂ ಕನಿಕರವೂ ಉಳ್ಳವನು.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿ ತಂದೆಯಿಲ್ಲದವರೂ ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ನೀವು ಚೈತ್ರಮಾಸದಲ್ಲಿ ಪಸ್ಕ ಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದಲ್ಲಿಯೇ ರಾತ್ರಿಕಾಲದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಲ್ಲವೇ.


ಬಳಿಕ ಮೋಶೆ ಆರೋನರು ಫರೋಹನ ಸನ್ನಿಧಿಗೆ ಹೋಗಿ - ಇಸ್ರಾಯೇಲ್ಯರ ದೇವರಾದ ಯೆಹೋವನು - ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡಿಸುವಂತೆ ಅವರಿಗೆ ಅಪ್ಪಣೆ ಕೊಡಬೇಕೆಂದು ಹೇಳಿದ್ದಾನೆ ಅಂದರು.


ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.


ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಹೇನ್, ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಟ್ಟಿರುವದು.


ಅದರೊಂದಿಗೆ ಪ್ರತಿದಿನ ಬೆಳಿಗ್ಗೆ ಧಾನ್ಯನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ ಅದನ್ನು ನೆನೆಯಿಸುವದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು; ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು; ಇದು ಶಾಶ್ವತನಿಯಮ.


ದಾವೀದನು ಇಸ್ರಾಯೇಲ್ಯರಲ್ಲಿ ಇದನ್ನು ಕಟ್ಟಳೆಯನ್ನಾಗಿ ನೇವಿುಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.


ನೀವು ಅವರಿಗೆ - ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನನ್ನು ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತುಹೋಯಿತೆಂಬದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲವೂ ಸಾಕ್ಷಿಗಳಾಗಿರುವವು ಅಂದನು.


ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನಂದರೆ - ಇಸ್ರಾಯೇಲ್ಯರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಅಂದರೆ ದೇವರ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವದಕ್ಕೆ ದಾನಮಾಡಿದ್ದೇನೆ; ಅವು ಸದಾಕಾಲವೂ ನಿಮಗೇ ಸಲ್ಲಬೇಕು.


ಆರೋನನ ಸಂತತಿಯವರಲ್ಲದ ಇತರರಲ್ಲಿ ಯಾರೂ ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು; ಸಮರ್ಪಿಸಿದರೆ ಕೋರಹನಿಗೂ ಅವನ ಜೊತೆಗಾರರಿಗೂ ಉಂಟಾದ ಗತಿಗೆ ಗುರಿಯಾದಾರೆಂದು ಇಸ್ರಾಯೇಲ್ಯರಿಗೆ ನೆನಪು ಹುಟ್ಟಿಸುವದಕ್ಕಾಗಿ ಅದು ಗುರುತಾಯಿತು.


ಆರೋನನ ವಂಶಸ್ಥರಾದ ಯಾಜಕರೇ ಆ ತುತೂರಿಗಳನ್ನು ಊದಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೇ ವೇಳೆಯಲ್ಲಿ ಇಸ್ರಾಯೇಲ್ಯರ ಸಮೂಹದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ಮಾಸದಲ್ಲೇ ಐಗುಪ್ತದೇಶದಿಂದ ಹೊರಟುಬಂದಿರಲ್ಲಾ. ಒಬ್ಬನೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಕೂಡದು.


ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.


ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು.


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.


ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ವಿಧಿಯಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ ಅನ್ಯದೇಶದವನೂ ಹಾಗೆಯೇ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು