ವಿಮೋಚನಕಾಂಡ 12:22 - ಕನ್ನಡ ಸತ್ಯವೇದವು J.V. (BSI)22 ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಬಟ್ಟಲಿನಲ್ಲಿರುವ ಆ ರಕ್ತದಲ್ಲಿ ಅದ್ದಿ ಬಾಗಲಿನ ಮೇಲಣ ಪಟ್ಟಿಗೂ ಎರಡು ನಿಲುವುಕಂಬಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಸೂರ್ಯೋದಯದೊಳಗಾಗಿ ಬಾಗಲಿನಿಂದ ಹೊರಗೆ ಹೋಗಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹಿಸ್ಸೋಪ್ ಗಿಡದ ಕುಚ್ಚನ್ನು ಬಟ್ಟಲಿನಲ್ಲಿರುವ ಆ ರಕ್ತದಲ್ಲಿ ಅದ್ದಿ ಬಾಗಿಲಿನ ಪಟ್ಟಿಗೂ ಅದರ ನಿಲುವು ಕಂಬಗಳೆರಡಕ್ಕೂ ಹಚ್ಚಿರಿ. ಬಳಿಕ ನಿಮ್ಮಲ್ಲಿ ಒಬ್ಬರೂ ಸೂರ್ಯೋದಯದವರೆಗೆ ಬಾಗಿಲಿನಿಂದ ಹೊರಗೆ ಹೋಗಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹಿಸ್ಸೋಪ ಗಿಡದ ಕಟ್ಟನ್ನು ತೆಗೆದುಕೊಂಡು, ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ, ಬಾಗಿಲಿನ ಮೇಲೆ ಅಡ್ಡ ಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವು ಕಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟುಹೋಗಬಾರದು. ಅಧ್ಯಾಯವನ್ನು ನೋಡಿ |