ವಿಮೋಚನಕಾಂಡ 12:29 - ಕನ್ನಡ ಸತ್ಯವೇದವು J.V. (BSI)29 ಅರ್ಧರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಬಂದಿವಾನನ ಚೊಚ್ಚಲು ಮಗನವರೆಗೂ ಐಗುಪ್ತದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅರ್ಧರಾತ್ರಿಯಲ್ಲಿ ಸರ್ವೇಶ್ವರ ಸ್ವಾಮಿ ಸಿಂಹಾಸನಾರೂಢನಾಗಬೇಕಾಗಿದ್ದ ಫರೋಹನ ಚೊಚ್ಚಲು ಮಗನು ಮೊದಲ್ಗೊಂಡು ಸೆರೆಯಲ್ಲಿದ್ದ ಖೈದಿಯ ಚೊಚ್ಚಲ ಮಗನವರೆಗೂ ಈಜಿಪ್ಟ್ ದೇಶದಲ್ಲಿದ್ದ ಎಲ್ಲ ಚೊಚ್ಚಲು ಮಕ್ಕಳನ್ನೂ ಪ್ರಾಣಿಗಳ ಚೊಚ್ಚಲ ಮರಿಗಳನ್ನೂ ಸಂಹಾರ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಮಧ್ಯರಾತ್ರಿಯಲ್ಲಿ ಸಿಂಹಾಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಎಂದರೆ ಈಜಿಪ್ಟ್ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ, ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಯೆಹೋವ ದೇವರು ಸಂಹರಿಸಿದರು. ಅಧ್ಯಾಯವನ್ನು ನೋಡಿ |
ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿದ್ದ ಮನುಷ್ಯರ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲುಮರಿಗಳನ್ನೂ ಅಂತೂ ಆ ದೇಶದ ಚೊಚ್ಚಲಾಗಿದ್ದದ್ದನ್ನೆಲ್ಲಾ ಸಂಹಾರ ಮಾಡಿದನು. ಆದಕಾರಣ ಗಂಡಾದ ಪ್ರಥಮ ಗರ್ಭವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವದುಂಟು; ಮನುಷ್ಯರಿಂದಾದ ಪ್ರಥಮಗರ್ಭವನ್ನಾದರೋ ಬದಲು ಕೊಟ್ಟು ಬಿಡಿಸುತ್ತೇವೆ ಎಂದು ಹೇಳಬೇಕು.