Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:3 - ಕನ್ನಡ ಸತ್ಯವೇದವು J.V. (BSI)

3 ಇದರ ವಿಷಯದಲ್ಲಿ ನೀವು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಅಪ್ಪಣೆ ಮಾಡಬೇಕಾದದ್ದೇನಂದರೆ - ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈ ವಿಷಯದಲ್ಲಿ ನೀವು ಇಸ್ರಯೇಲರ ಸಮಾಜಕ್ಕೆಲ್ಲ ಈ ರೀತಿ ಕಟ್ಟಳೆಯಿಡಬೇಕು: ‘ಈ ತಿಂಗಳ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ಆರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತದೆ. ಈ ತಿಂಗಳ ಹತ್ತನೆಯ ದಿನದಲ್ಲಿ ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇನೆಂದರೆ, ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಪ್ರತಿ ಗೋತ್ರಗಳ ಪ್ರತಿಯೊಂದು ಕುಟುಂಬಕ್ಕೆ ಒಂದರಂತೆ ಕುರಿಮರಿಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:3
26 ತಿಳಿವುಗಳ ಹೋಲಿಕೆ  

ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೆ ಹುಳಿಯನ್ನು ತೆಗೆದುಹಾಕಿ ಹೊಸ ಕಣಿಕದಂತಾಗಿರ್ರಿ. ಯಾಕಂದರೆ ನಮ್ಮ ಪಸ್ಕದ ಯಜ್ಞದ ಕುರಿಯು ಕೊಯಿದದೆ; ಅದಾವದಂದರೆ ಕ್ರಿಸ್ತನೇ.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಮತ್ತು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರಮಾಡುವನು.


ಆಜ್ಞಾಪಿಸಬೇಕಾದದ್ದೇನಂದರೆ - ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅದನ್ನು ದನಗಳಿಂದಾಗಲಿ ಆಡುಕುರಿಗಳಿಂದಾಗಲಿ ತೆಗೆದುಕೊಂಡು ಸಮರ್ಪಿಸಬೇಕು.


ಮರುದಿವಸ ಜಾತ್ರೆಗೆ ಬಂದಿದ್ದ ಜನಸಮೂಹವು ಯೇಸು ಯೆರೂಸಲೇವಿುಗೆ ಬರುತ್ತಾನೆಂದು ಕೇಳಿ ಖರ್ಜೂರದ ಗರಿಗಳನ್ನು ತಕ್ಕೊಂಡು


ಅಗೋ ಯಜ್ಞಕ್ಕೆ ದೇವರು ನೇವಿುಸಿದ ಕುರಿ ಅಂದನು.


ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕ ಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ ಕುರಿಮರಿಗಳನ್ನೂ ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.


ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಮೇರೆಗೆ ನೀವು ನೈವೇದ್ಯ ಮಾಡಬೇಕು.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೇ ವೇಳೆಯಲ್ಲಿ ಇಸ್ರಾಯೇಲ್ಯರ ಸಮೂಹದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು.


ನಾನು ಮಾಡಿದ ವಾಗ್ದಾನವನ್ನು ನೆನಸಿಕೊಂಡೆನು. ಆದದರಿಂದ ನೀನು ಇಸ್ರಾಯೇಲ್ಯರಿಗೆ [ನನ್ನ ಹೆಸರಿನಲ್ಲಿ] ಹೇಳಬೇಕಾದದ್ದೇನಂದರೆ - ನಾನು ಯೆಹೋವನು; ಐಗುಪ್ತ್ಯರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸಗಳನ್ನು ನಾನು ತಪ್ಪಿಸಿ ಅವರಲ್ಲಿ ನಿಮಗಿರುವ ದಾಸತ್ವವನ್ನು ತೊಲಗಿಸಿ ನನ್ನ ಕೈ ಚಾಚಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಯೆಹೋವನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ತಿಳಿಸಿ ಜನರ ಮುಂದೆ ಆ ಮಹತ್ಕಾರ್ಯಗಳನ್ನು ಮಾಡಲು ಜನರು ನಂಬಿದರು.


ಮಗನೇ, ಹೋಮಕ್ಕೆ ಬೇಕಾದ ಕುರಿಯನ್ನು ದೇವರೇ ಒದಗಿಸುವನು ಅಂದನು. ಹೀಗೆ ಅವರಿಬ್ಬರೂ ಹೋದರು.


ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮಮಾಡಿದನು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು. ಹೇಗಂದರೆ -


ನಾಳೆ ಬೆಳಿಗ್ಗೆ ನೀವು ಕುಲಕುಲವಾಗಿ ನನ್ನ ಬಳಿಗೆ ಬನ್ನಿರಿ. ಯೆಹೋವನು ಯಾವ ಕುಲವನ್ನು ಹಿಡಿಯುತ್ತಾನೋ ಆ ಕುಲವು ಗೋತ್ರ ಗೋತ್ರವಾಗಿಯೂ, ಯಾವ ಗೋತ್ರವನ್ನು ಹಿಡಿಯುತ್ತಾನೋ ಆ ಗೋತ್ರವು ಕುಟುಂಬ ಕುಟುಂಬವಾಗಿಯೂ, ಯಾವ ಕುಟುಂಬವನ್ನು ಹಿಡಿಯುತ್ತಾನೋ ಆ ಕುಟುಂಬದವರು ಒಬ್ಬೊಬ್ಬರಾಗಿಯೂ ಬರಬೇಕು.


ಅವರು ಮೋಶೆಗೆ - ನೀನೇ ನಮ್ಮ ಸಂಗಡ ಮಾತಾಡು; ನಾವು ಕೇಳುವೆವು. ದೇವರು ನಮ್ಮ ಸಂಗಡ ಮಾತಾಡಿದರೆ ನಾವು ಸತ್ತೇವು ಎಂದು ಹೇಳಿದರು.


ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ನನಗೆ ಮೊರೆಯಿಡುವದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲ್ಯರಿಗೆ ಹೇಳು.


ಪಸ್ಕಹಬ್ಬವು ಇನ್ನು ಆರು ದಿವಸ ಮುಂದೆ ಇರಲಾಗಿ ಯೇಸು ಬೇಥಾನ್ಯಕ್ಕೆ ಬಂದನು. ಯೇಸುವು ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಅಲ್ಲಿದ್ದನು.


ಎಲ್ಲಾ ಮಾಸಗಳಲ್ಲಿ ಇದೇ ನಿಮಗೆ ಆದಿಮಾಸವಾಗಿರಬೇಕು, ಇದೇ ನಿಮಗೆ ಪ್ರತಿ ವರುಷದ ಮೊದಲನೆಯ ತಿಂಗಳಾಗಿರಬೇಕು.


ಕುಟುಂಬವು ಚಿಕ್ಕದಾಗಿದ್ದು ಪೂರಾ ಒಂದು ಮರಿಯನ್ನು ತಿನ್ನುವದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದೊಂದಿಗೆ ಸೇರಿ ಒಬ್ಬೊಬ್ಬನು ಇಷ್ಟಿಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ.


ಆಗ ಮೋಶೆಯು ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡ ಕರಸಿ ಅವರಿಗೆ - ನೀವು ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಹಿಂಡಿನಿಂದ ಮರಿಗಳನ್ನು ತೆಗೆದುಕೊಂಡು ಪಸ್ಕ ಹಬ್ಬಕ್ಕೆ ಕೊಯ್ಯಿರಿ.


ನಾವು ಸೆರೆಯಾದ ಇಪ್ಪತ್ತೈದನೆಯ ವರುಷದ ಅಂದರೆ ಪಟ್ಟಣವು ಹಾಳಾದ ಹದಿನಾಲ್ಕನೆಯ ವರುಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ, ಹೌದು, ಆ ದಿನದಲ್ಲೇ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನ್ನನ್ನು ಅಲ್ಲಿಗೆ ಒಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು