ವಿಮೋಚನಕಾಂಡ 12:34 - ಕನ್ನಡ ಸತ್ಯವೇದವು J.V. (BSI)34 ಆದದರಿಂದ ಆ ಜನರು ತಮ್ಮ ಹಿಟ್ಟಿಗೆ ಹುಳಿಹಾಕುವದಕ್ಕಿಂತ ಮೊದಲೇ ನಾದುವ ಕೊಣವಿಗೆಗಳಲ್ಲಿ ಇದ್ದ ಕಣಕದ ಮುದ್ದೆಯನ್ನು ಗಂಟುಕಟ್ಟಿ ಹೆಗಲಿನ ಮೇಲೆ ಹಾಕಿಕೊಂಡು ಹೊರಟುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆದುದರಿಂದ ಜನರು ಹಿಟ್ಟಿಗೆ ಹುಳಿಹಾಕುವುದಕ್ಕಿಂತ ಮೊದಲೇ ನಾದುವ ಪಾತ್ರೆಗಳ ಸಂಗಡ ಕಣಕದ ಮುದ್ದೆಯನ್ನು ಬಟ್ಟೆಯಲ್ಲಿ ಗಂಟುಕಟ್ಟಿ ಹೆಗಲಿನ ಮೇಲೆ ಹಾಕಿಕೊಂಡು ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆದುದರಿಂದ ಇಸ್ರಯೇಲರು ಹಿಟ್ಟಿಗೆ ಹುಳಿಹಾಕುವುದಕ್ಕಿಂತ ಮುಂಚೆಯೇ ನಾದುವ ಹರಿವಾಣಗಳಲ್ಲಿದ್ದ ಕಣಕದ ಮುದ್ದೆಯನ್ನು ಹಾಗೆಯೇ ಗಂಟುಕಟ್ಟಿ ತಮ್ಮ ಹೆಗಲಿನ ಮೇಲೆ ಹಾಕಿಕೊಂಡು ಹೊರಟೇಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ತಮ್ಮ ರೊಟ್ಟಿಗೆ ಹುಳಿಹಾಕಲು ಇಸ್ರೇಲರಿಗೆ ಸಮಯವಿರಲಿಲ್ಲ. ಅವರು ಹಿಟ್ಟಿನ ಮುದ್ದೆಯನ್ನು ಬಟ್ಟೆಯಲ್ಲಿ ಸುತ್ತಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದ್ದರಿಂದ ಜನರು ಹಿಟ್ಟಿಗೆ ಹುಳಿ ಹಾಕುವುದಕ್ಕಿಂತ ಮುಂಚೆ, ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ, ಹೆಗಲಿನ ಮೇಲೆ ಹೊತ್ತುಕೊಂಡು ಹೋದರು. ಅಧ್ಯಾಯವನ್ನು ನೋಡಿ |