ವಿಮೋಚನಕಾಂಡ 12:39 - ಕನ್ನಡ ಸತ್ಯವೇದವು J.V. (BSI)39 ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿದ್ದಿಲ್ಲ, ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಿಪಡಿಸಿಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವರು ಐಗುಪ್ತ ದೇಶದಿಂದ ತಂದ ನಾದಿದ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಕೊಂಡರು. ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿರಲಿಲ್ಲ ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಈಜಿಪ್ಟ್ ದೇಶದಿಂದ ಅವರು ತಂದಿದ್ದ ಕಣಕದ ಮುದ್ದೆಯಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಸುಟ್ಟರು. ಅಲ್ಲಿಂದ ಅವರನ್ನು ಹೊರಡಿಸಿದಾಗ ಸ್ವಲ್ಪವೂ ಸಮಯ ಸಿಕ್ಕದೆ ಕಣಕದಲ್ಲಿ ಹುಳಿಯನ್ನು ಕಲಸಲಿಕ್ಕೂ ಆಗಲಿಲ್ಲ ಹಾಗು ಬೇರೆ ಆಹಾರವನ್ನು ಸಿದ್ಧಪಡಿಸಿಕೊಳ್ಳಲೂ ಸಾಧ್ಯವಾಗಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ರೊಟ್ಟಿಗೆ ಹುಳಿಹಾಕುವಷ್ಟು ಸಮಯವೂ ಜನರಿಗೆ ಇರಲಿಲ್ಲ; ಅವರು ತಮ್ಮ ಪ್ರಯಾಣಕ್ಕಾಗಿ ವಿಶೇಷ ಆಹಾರವನ್ನು ತಯಾರಿಸುವುದಕ್ಕೂ ಆಗಲಿಲ್ಲ. ಆದ್ದರಿಂದ ಅವರು ಹುಳಿಯಿಲ್ಲದ ರೊಟ್ಟಿ ಮಾಡಿ ತಮ್ಮೊಡನೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆಗ ಅವರು ಈಜಿಪ್ಟಿನಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿಯಾಗದ ಕಾರಣ, ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿದರು. ಏಕೆಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಈಜಿಪ್ಟಿನಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿ |