ವಿಮೋಚನಕಾಂಡ 12:4 - ಕನ್ನಡ ಸತ್ಯವೇದವು J.V. (BSI)4 ಕುಟುಂಬವು ಚಿಕ್ಕದಾಗಿದ್ದು ಪೂರಾ ಒಂದು ಮರಿಯನ್ನು ತಿನ್ನುವದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದೊಂದಿಗೆ ಸೇರಿ ಒಬ್ಬೊಬ್ಬನು ಇಷ್ಟಿಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕುಟುಂಬವು ಚಿಕ್ಕದಾಗಿದ್ದರೆ, ಒಂದು ಕುರಿಮರಿಯನ್ನು ಪೂರ್ಣವಾಗಿ ತಿನ್ನುವುದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದವರೊಂದಿಗೆ ಸೇರಿ, ಒಬ್ಬೊಬ್ಬನು ಎಷ್ಟೆಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕುಟುಂಬವು ಚಿಕ್ಕದಾಗಿದ್ದು ಒಂದು ಮರಿಯನ್ನು ಪೂರ್ತಿಯಾಗಿ ತಿನ್ನಲಾಗದಿದ್ದರೆ ಹತ್ತಿರದ ನೆರೆಮನೆಯ ಕುಟುಂಬದೊಂದಿಗೆ ಸೇರಿ ಒಬ್ಬೊಬ್ಬನು ಇಷ್ಟಿಷ್ಟು ತಿನ್ನುವನೆಂದು ಲೆಕ್ಕ ಹಾಕಿ ಜನಗಳ ಸಂಖ್ಯಾನುಸಾರ ಮರಿಗಳನ್ನು ಆರಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅದನ್ನು ಸಂಪೂರ್ಣವಾಗಿ ತಿನ್ನಲು ಅವನ ಮನೆಯಲ್ಲಿ ಸಾಕಷ್ಟು ಜನರಿಲ್ಲದಿದ್ದರೆ ಅವನು ತನ್ನ ನೆರೆಯವರನ್ನು ಆಮಂತ್ರಿಸಿ ಅವರೊಂದಿಗೆ ಅದರ ಮಾಂಸವನ್ನು ಹಂಚಿಕೊಳ್ಳಬೇಕು. ಪ್ರತಿಯೊಬ್ಬನಿಗೂ ತಿನ್ನಲು ಸಾಕಷ್ಟು ಮಾಂಸವಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆ ಕುರಿಮರಿಯನ್ನು ಪೂರ್ತಿಯಾಗಿ ತಿನ್ನುವುದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ, ತನ್ನ ಮನೆಗೆ ಸಮೀಪವಾಗಿರುವ ತನ್ನ ನೆರೆಯವನ ಕುಟುಂಬದಲ್ಲಿ ಲೆಕ್ಕನೋಡಿ ಅವರೊಂದಿಗೆ ಪಾಲು ಹೊಂದಲಿ. ಒಬ್ಬೊಬ್ಬನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತೆಗೆದುಕೊಳ್ಳಲಿ. ಅಧ್ಯಾಯವನ್ನು ನೋಡಿ |