Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:43 - ಕನ್ನಡ ಸತ್ಯವೇದವು J.V. (BSI)

43 ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನಂದರೆ - ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗಂದರೆ - ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಯೆಹೋವನು ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ, “ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗೆಂದರೆ, ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು: “ಪಾಸ್ಕಹಬ್ಬ ಆಚರಣೆಯ ಕ್ರಮ ಇದು - ವಿದೇಶೀಯನಾರೂ ಆ ಭೋಜನದಲ್ಲಿ ಪಾಲ್ಗೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಯೆಹೋವನು ಮೋಶೆ ಆರೋನರಿಗೆ, “ಪಸ್ಕಹಬ್ಬದ ನಿಯಮಗಳು ಇಂತಿವೆ: ಯಾವ ಪರದೇಶಿಯೂ ಪಸ್ಕಹಬ್ಬದ ಊಟವನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಯೆಹೋವ ದೇವರು ಮೋಶೆ ಆರೋನರಿಗೆ, “ಪಸ್ಕದ ಶಾಸನವು ಇದೆ: “ವಿದೇಶಿಯರಲ್ಲಿ ಯಾರೂ ಪಸ್ಕಭೋಜನವನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:43
9 ತಿಳಿವುಗಳ ಹೋಲಿಕೆ  

ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕ ಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕು; ತರುವಾಯ ಅವನು ಹತ್ತಿರ ಬಂದು ಈ ಹಬ್ಬವನ್ನು ಆಚರಿಸಬಹುದು. ಅಂಥವನು ಸ್ವದೇಶದವನಂತೆಯೇ ಇರುವನು; ಆದರೆ ಸುನ್ನತಿ ಮಾಡಿಸಿಕೊಳ್ಳದವನು ಆ ಭೋಜನವನ್ನು ಮಾಡಲೇ ಕೂಡದು.


ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.


ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗಂದರೆ - ನೀವು ನಡುವನ್ನು ಕಟ್ಟಿ ಕೆರವನ್ನು ಮೆಟ್ಟಿಕೊಂಡು ಕೋಲು ಹಿಡಿದು ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.


ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.


ಯಾಜಕನಲ್ಲದ ಇತರನು ನೈವೇದ್ಯ ಪದಾರ್ಥವನ್ನು ಊಟಮಾಡಕೂಡದು. ಯಾಜಕನ ಬಳಿಯಲ್ಲಿ ಇಳುಕೊಂಡವನಾಗಲಿ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.


ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ - ಯೆಹೋವನು ನಿನಗೆ ಹೇಳುವದೇನಂದರೆ - ಇಸ್ರಾಯೇಲ್ಯರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ


ಜನರಲ್ಲಿ ಅನೇಕಾನೇಕರು ಅಂದರೆ ಹೆಚ್ಚಾಗಿ ಎಫ್ರಾಯೀಮ್ ಮನಸ್ಸೆ ಇಸ್ಸಾಕಾರ್ ಜೆಬುಲೂನ್ ಪ್ರಾಂತಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು - ಯೆಹೋವನೇ, ದಯಾಪರನಾದ ದೇವರೇ, ದೇವಾಲಯಯಾತ್ರಿಕರಿಗಿರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ


ಇಸ್ರಾಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಫರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಹೊಲೆಗೆಡಿಸಿ ನನ್ನ ಒಡಂಬಡಿಕೆಯನ್ನು ಭಂಗಪಡಿಸಿ ನಿಮ್ಮ ಅವಿುತದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ;


ಯಾಜಕನ ಮಗಳು ವಿಧವೆಯಾಗಿಯಾಗಲಿ ಗಂಡನಿಂದ ಬಿಡಲ್ಪಟ್ಟವಳಾಗಿಯಾಗಲಿ ಮಕ್ಕಳಿಲ್ಲದ ಪಕ್ಷಕ್ಕೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ತಿರಿಗಿ ತಂದೆಯ ಮನೆ ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಉಣ್ಣಲೇಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು