ವಿಮೋಚನಕಾಂಡ 12:46 - ಕನ್ನಡ ಸತ್ಯವೇದವು J.V. (BSI)46 ಒಂದೇ ಮನೆಯಲ್ಲಿ ಅದನ್ನು ಊಟಮಾಡಬೇಕು; ಅದರಲ್ಲಿ ಸ್ವಲ್ಪವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಅವರವರ ಮನೆಯಲ್ಲಿಯೇ ಅದನ್ನು ಊಟಮಾಡಬೇಕು. ಅದರಲ್ಲಿ ಸ್ವಲ್ಪ ಮಾಂಸವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಅಡಿಗೆ ಮಾಡಿದ ಮನೆಯಲ್ಲೆ ಅದನ್ನು ಊಟಮಾಡಬೇಕು. ಅದರಲ್ಲಿ ಕಿಂಚಿತ್ತನ್ನೂ ಆ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಬಲಿಪ್ರಾಣಿಯ ಎಲುಬೊಂದನ್ನಾದರೂ ಮುರಿಯಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 “ಪಸ್ಕಹಬ್ಬದ ಊಟವನ್ನು ಮನೆಯೊಳಗೆ ತಿನ್ನಬೇಕು. ಪಸ್ಕದ ಮಾಂಸವನ್ನು ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಕುರಿಮರಿಯ ಎಲುಬುಗಳಲ್ಲಿ ಯಾವುದನ್ನೂ ಮುರಿಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 “ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು. ಅಧ್ಯಾಯವನ್ನು ನೋಡಿ |