Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:48 - ಕನ್ನಡ ಸತ್ಯವೇದವು J.V. (BSI)

48 ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕ ಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕು; ತರುವಾಯ ಅವನು ಹತ್ತಿರ ಬಂದು ಈ ಹಬ್ಬವನ್ನು ಆಚರಿಸಬಹುದು. ಅಂಥವನು ಸ್ವದೇಶದವನಂತೆಯೇ ಇರುವನು; ಆದರೆ ಸುನ್ನತಿ ಮಾಡಿಸಿಕೊಳ್ಳದವನು ಆ ಭೋಜನವನ್ನು ಮಾಡಲೇ ಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ನಿಮ್ಮ ಬಳಿ ವಾಸವಾಗಿರುವ ವಿದೇಶೀಯನೊಬ್ಬನು ಸರ್ವೇಶ್ವರನಿಗೆ ಈ ಪಾಸ್ಕಹಬ್ಬವನ್ನು ಕೊಂಡಾಡಬೇಕೆಂಬ ಆಸೆಯಿದ್ದರೆ ಅವನೂ ಅವನ ಕುಟುಂಬಕ್ಕೆ ಸೇರಿದ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ಬಳಿಕ ಅವನು ಬಂದು ಈ ಹಬ್ಬವನ್ನು ಆಚರಿಸಬಹುದು. ಅಂಥವನು ಸ್ವದೇಶದವನಂತೆ ಆಗುತ್ತಾನೆ. ಆದರೆ ಸುನ್ನತಿ ಮಾಡಿಸಿಕೊಳ್ಳದ ಯಾವನೂ ಆ ಭೋಜನದಲ್ಲಿ ಭಾಗಿ ಆಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಪರದೇಶದವನು ಯೆಹೋವನ ಪಸ್ಕ ಭೋಜನದಲ್ಲಿ ಪಾಲುಗಾರನಾಗಬೇಕೆಂದು ಬಯಸಿದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕು. ಆಗ ಅವನು ಇಸ್ರೇಲಿನವನಾಗುವುದರಿಂದ ಭೋಜನದಲ್ಲಿ ಪಾಲುಗಾರನಾಗಬಹುದು. ಆದರೆ ಸುನ್ನತಿಯಾಗಿಲ್ಲದವನು ಪಸ್ಕದ ಊಟ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 “ನಿಮ್ಮ ಜೊತೆಯಲ್ಲಿ ವಾಸಮಾಡಿದ ಪರದೇಶದವನು ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ, ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ. ತರುವಾಯ ಅವನು ಅದನ್ನು ಆಚರಿಸುವುದಕ್ಕೆ ಸಮೀಪಬರಲಿ, ಅಂಥವರು ಸ್ವದೇಶದಲ್ಲಿ ಹುಟ್ಟಿದವರಂತೆ ಇರುವರು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:48
12 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ನಿಮಗೂ ನಿಮ್ಮ ಮಧ್ಯದಲ್ಲಿ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಾಯೇಲ್ಯರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.


ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನಂದರೆ - ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗಂದರೆ - ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.


ಆ ಏಳು ದಿನಗಳೂ ನಿಮ್ಮ ಮನೆಗಳಲ್ಲಿ ಹುಳಿಯಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಲಿ ಸ್ವದೇಶದವನಾಗಲಿ ಇಸ್ರಾಯೇಲ್ ಜನರೊಳಗಿಂದ ತೆಗೆದುಹಾಕಲ್ಪಡಬೇಕು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರಲ್ಲಿ ಸೇರಿಕೊಂಡಿರುವ ಮ್ಲೇಚ್ಫರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.


ಎಲ್ಲಾ ತಲಾಂತರಗಳಲ್ಲಿ ನಿಮ್ಮಲ್ಲಿರುವ ಪ್ರತಿಯೊಬ್ಬ ಗಂಡಸೂ, ಮನೆಯಲ್ಲಿ ಹುಟ್ಟಿದವನಾದರೂ ನಿನ್ನ ಸಂತತಿಯಲ್ಲಿ ಹುಟ್ಟದೆ ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾದರೂ ಎಂಟು ದಿನಗಳ ವಯಸ್ಸುಳ್ಳವನಾದಾಗ ಅವನಿಗೆ ಸುನ್ನತಿ ಮಾಡಿಸಬೇಕು.


ನೀವು ಮಾನಸ್ಥಾನದಲ್ಲಿ ಸುನ್ನತಿ ಮಾಡಿಸಿಕೊಳ್ಳಬೇಕು; ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತು.


ಏಕಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ಅಗಲಿ ತನ್ನ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಟ್ಟು


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು