Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:49 - ಕನ್ನಡ ಸತ್ಯವೇದವು J.V. (BSI)

49 ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ವಿಧಿಯಿರಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಸ್ವದೇಶದವನಿಗೂ, ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಸ್ವದೇಶಿಗೂ ನಿಮ್ಮೊಡನೆ ವಾಸವಾಗಿರುವ ವಿದೇಶಿಗೂ ಅನ್ವಯಿಸುವ ವಿಧಿ ಒಂದೇ ಆಗಿರುತ್ತದೆ,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಪ್ರತಿಯೊಬ್ಬರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಸ್ವದೇಶದಲ್ಲಿ ಹುಟ್ಟಿದವನಿಗೂ, ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯನಿಗೂ ಒಂದೇ ನಿಯಮವಿರಲಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:49
9 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ಇಸ್ರಾಯೇಲ್ಯರಲ್ಲಿರುವ ಸ್ವದೇಶದವರಿಗೂ ಅನ್ಯದೇಶದವರಿಗೂ ಒಂದೇ ವಿಧಿಯಿರಬೇಕು.


ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.


ಅನ್ಯರಿಗಾಗಲಿ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ವಿಧಿಯಿರಬೇಕು. ನಾನು ನಿಮ್ಮ ದೇವರಾದ ಯೆಹೋವನು.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಇಸ್ರಾಯೇಲ್ಯರೆಲ್ಲರೂ ಮಾಡಿದರು.


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲ್ಯನಾಗಲಿ ಪರದೇಶದವನಾಗಲಿ ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಹೊಂದಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು