Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:50 - ಕನ್ನಡ ಸತ್ಯವೇದವು J.V. (BSI)

50 ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಇಸ್ರಾಯೇಲ್ಯರೆಲ್ಲರೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರೆಲ್ಲರೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಮೋಶೆ ಮತ್ತು ಆರೋನರಿಗೆ ಸರ್ವೇಶ್ವರ ಆಜ್ಞಾಪಿಸಿದ ಮೇರೆಗೆ ಇಸ್ರಯೇಲರೆಲ್ಲರೂ ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರೇಲರೆಲ್ಲರೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಇಸ್ರಾಯೇಲರೆಲ್ಲಾ ಯೆಹೋವ ದೇವರು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:50
21 ತಿಳಿವುಗಳ ಹೋಲಿಕೆ  

ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.


ನೀವು ಇದನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಆತನ ತಾಯಿಯು ಕೆಲಸದವರಿಗೆ - ಆತನು ನಿಮಗೆ ಏನು ಹೇಳುವನೋ ಅದನ್ನು ಮಾಡಿರಿ ಅಂದಳು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ನಾನೂರಮೂವತ್ತು ವರುಷಗಳು ಕಳೆದನಂತರ ಅದೇ ದಿವಸದಲ್ಲಿ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಟುಹೋದವು.


ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನನ್ನ ಜನರಾಗಿರುವ ಇಸ್ರಾಯೇಲ್ಯರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರ ತರುವೆನು.


ಇಸ್ರಾಯೇಲ್ಯರ ಸೈನ್ಯವನ್ನೆಲ್ಲಾ ಐಗುಪ್ತ ದೇಶದಿಂದ ನಡಿಸಿಕೊಂಡು ಬರುವದಕ್ಕೆ ಯೆಹೋವನಿಂದ ಆಜ್ಞೆಹೊಂದಿದ ಆರೋನ ಮೋಶೆಯರು ಇವರೇ.


ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತದೇಶವನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.


ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ವಿಧಿಯಿರಬೇಕು ಅಂದನು.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಸೈನ್ಯ ಸೈನ್ಯವಾಗಿ ಐಗುಪ್ತದೇಶದಿಂದ ಹೊರಗೆ ಬರಮಾಡಿದನು.


ಯೆಹೋವನ ಆಜ್ಞೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಟ್ಟನು.


ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವದರಿಂದ ಅವರು ಅದನ್ನು ಅಪವಿತ್ರಮಾಡಬಾರದು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು; ಅಂಥವರೆಲ್ಲರನ್ನೂ ಪಾಳೆಯದಿಂದ ಹೊರಡಿಸಿದರು.


ಇಸ್ರಾಯೇಲ್ಯರಿಗೋಸ್ಕರ ದೇವದರ್ಶನದ ಗುಡಾರದ ಪರಿಚರ್ಯವನ್ನು ನಡಿಸುವದಕ್ಕೂ ದೋಷಪರಿಹಾರವನ್ನು ಮಾಡುವದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವದರಿಂದ ಇಸ್ರಾಯೇಲ್ಯರು ದೇವಸ್ಥಾನದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವದಿಲ್ಲ.


ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ ಆರೋನರೂ ಇಸ್ರಾಯೇಲ್ಯರ ಸಮೂಹದವರೆಲ್ಲರೂ ಮಾಡಿದರು.


ಆಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನದ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ನಡಿಸಲಾರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.


ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಅದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು.


ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ವಿುಲ್ಕಾ, ನೋವಾ ಎಂಬವರು ಯೆಹೋವನ ಆಜ್ಞಾನುಸಾರ ನಡೆದು ತಂದೆಯ ಅಣ್ಣತಮ್ಮಂದಿರ ಮಕ್ಕಳನ್ನು ಮದುವೆಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು