Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:7 - ಕನ್ನಡ ಸತ್ಯವೇದವು J.V. (BSI)

7 ಅವರು ಅವುಗಳ ರಕ್ತದಲ್ಲಿ ಸ್ವಲ್ಪ ತೆಗೆದು ತಾವು ಆ ಭೋಜನವನ್ನು ಮಾಡುವ ಮನೇಬಾಗಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಆ ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವುಗಳ ರಕ್ತದಲ್ಲಿ ಸ್ವಲ್ಪ ತೆಗೆದು ತಾವು ಆ ಭೋಜನ ಮಾಡುವ ಮನೆಯ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಪಶುಗಳ ರಕ್ತವನ್ನು ತೆಗೆದಿಟ್ಟು ಜನರು ಭೋಜನಮಾಡುವ ಮನೆಗಳ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗಳಿಗೂ ಆ ರಕ್ತವನ್ನು ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ರಕ್ತದಲ್ಲಿ ಸ್ವಲ್ಪ ತೆಗೆದು, ಕುರಿಮರಿಯ ಮಾಂಸವನ್ನು ಭೋಜನಮಾಡುವ ಮನೆಗಳ ಬಾಗಿಲಿನ ನಿಲುವು ಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:7
12 ತಿಳಿವುಗಳ ಹೋಲಿಕೆ  

ಚೊಚ್ಚಲಮಕ್ಕಳನ್ನು ಸಂಹರಿಸುವವನು ಇಸ್ರಾಯೇಲ್ಯರನ್ನು ಮುಟ್ಟದಂತೆ ಅವನು ಪಸ್ಕವೆಂಬ ಊಟವನ್ನೂ ರಕ್ತಪ್ರೋಕ್ಷಣಾಚಾರವನ್ನೂ ನೇವಿುಸಿದ್ದು ನಂಬಿಕೆಯಿಂದಲೇ.


ಧರ್ಮಶಾಸ್ತ್ರದ ಪ್ರಕಾರ ಸ್ವಲ್ಪಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತಧಾರೆಯಿಲ್ಲದೆ ಪಾಪಪರಿಹಾರ ಉಂಟಾಗುವದಿಲ್ಲ.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಪವಿತ್ರರಾಗುತ್ತಿರುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಸಿದ್ಧಿಗೆ ತಂದಿದ್ದಾನಷ್ಟೆ.


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ನಿಮ್ಮ ಮನೇಬಾಗಲಿನ ನಿಲುವುಪಟ್ಟಿಗಳಲ್ಲಿಯೂ ಹೆಬ್ಬಾಗಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು.


ಗರ್ಭಗೃಹದ ಬಾಗಲಿಗೆ ಎಣ್ಣೇಮರದ ಕದಗಳನ್ನು ಹಚ್ಚಿಸಿದನು.


ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


[ನೀವು ಬಾಗಲಿಗೆ ಹಚ್ಚಿದ] ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವದಾದ ಕಾರಣ ನಾನು ಅದನ್ನು ಕಂಡು ನಿಮಗೆ ಯಾವ ನಷ್ಟವನ್ನೂ ಮಾಡದೆ ಮುಂದಕ್ಕೆ ದಾಟಿ ಹೋಗುವೆನು. ನಾನು ಐಗುಪ್ತದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು