Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:8 - ಕನ್ನಡ ಸತ್ಯವೇದವು J.V. (BSI)

8 ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು; ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಂಗಡ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ರಾತ್ರಿಯಲ್ಲೇ ಆ ಮಾಂಸವನ್ನು ತಿನ್ನಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಮೇತ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ರಾತ್ರಿಯಲ್ಲಿಯೇ ಮಾಂಸವನ್ನು ಸುಟ್ಟು, ಅದನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:8
20 ತಿಳಿವುಗಳ ಹೋಲಿಕೆ  

ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದವರೆಗೂ ಉಳಿಸಬಾರದು.


ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿವಸ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟುಹೋಗಬಹುದು.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಜಾತ್ರೆಯಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ವಪೆಯನ್ನು ಮಾರಣೆ ದಿನದವರೆಗೂ ಇಡಲೇಬಾರದು.


ಆ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು ನಿಮ್ಮ ದೇಶದಲ್ಲೆಲ್ಲಾ ಹುಳಿಹಿಟ್ಟಾಗಲಿ ಹುಳಿಯಾಗಲಿ ನಿಮ್ಮ ಬಳಿಯಲ್ಲಿ ಇರಲೇಕೂಡದು.


ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು.


ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಮಾಡುವ ಕೆಲಸದಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಗಳನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿಸಿದ ಎಲ್ಲಾ ಸೇವೆಯೂ ಬಹುಕಠೋರವಾಗಿತ್ತು.


ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನಾದ ಯೇಸುವನ್ನೂ ಅನುಸರಿಸುವವರಾದಿರಿ.


ಸ್ವಲ್ಪ ಹುಳಿಯಿಂದ ಕಣಿಕವೆಲ್ಲಾ ಹುಳಿಯಾಗುವದು.


ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಶಿಷ್ಯರಿಗೆ ಕೊಟ್ಟು - ತಕ್ಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ ಅಂದನು.


ಆಗ ಅವರು ರೊಟ್ಟಿಯ ಹುಳಿ ಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬದಾಗಿ ತಿಳುಕೊಂಡರು.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮಮಾಡಿರಿ, [ಕೊಟ್ಟ] ಕಾಣಿಕೆಗಳನ್ನು ಪ್ರಕಟಿಸಿರಿ, ಸಾರಿಕೊಳ್ಳಿರಿ; ಇಸ್ರಾಯೇಲ್ಯರೇ, ಹೀಗೆ ಮಾಡುವದು ನಿಮಗಿಷ್ಟವಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಸಡಲಿಹೋಗಿವೆ. ನನ್ನ ಗುಂಡಿಗೆ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.


ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು; ಅದನ್ನೆಲ್ಲಾ ತಲೆ ತೊಡೆ ಹೊಟ್ಟೆಯೊಳಗಣವುಗಳು ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು.


ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ ಬಾನೆ ಹಂಡೆಗಳಲ್ಲಿ ಬೇಯಿಸಿ ಬೇಗನೆ ತಂದು ಜನರಿಗೆ ಬಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು