Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:18 - ಕನ್ನಡ ಸತ್ಯವೇದವು J.V. (BSI)

18 ಆತನು - ಈ ಜನರಿಗೆ ಯುದ್ಧಪ್ರಾಪ್ತವಾದರೆ ಅವರು ಧೈರ್ಯಗೆಟ್ಟು ಐಗುಪ್ತದೇಶಕ್ಕೆ ಹಿಂದಿರುಗಾರು ಅಂದುಕೊಂಡನು. ಇಸ್ರಾಯೇಲ್ಯರು ಯುದ್ಧಸನ್ನದ್ಧರಾಗಿ ಐಗುಪ್ತದೇಶದಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಸ್ರಯೇಲರು ಯುದ್ಧಸನ್ನದ್ಧ ಆಗಿಯೇ ಈಜಿಪ್ಟಿನಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ಯೆಹೋವನು ಅವರನ್ನು ಕೆಂಪು ಸಮುದ್ರದ ಅರಣ್ಯದ ಮೂಲಕ ನಡೆಸಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟಾಗ ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗಿರುವುದರಿಂದ ಯೆಹೋವ ದೇವರು ಜನರನ್ನು ಕೆಂಪುಸಮುದ್ರದ ಮರುಭೂಮಿಯಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದರು. ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಈಜಿಪ್ಟ್ ದೇಶದೊಳಗಿಂದ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:18
13 ತಿಳಿವುಗಳ ಹೋಲಿಕೆ  

ಆತನು ಅವರನ್ನು ಶೂನ್ಯವೂ ಭಯಂಕರವೂ ಆಗಿರುವ ಮರಳುಕಾಡಿನಲ್ಲಿ ಕಂಡು ಪರಾಮರಿಸಿ ಪ್ರೀತಿಯಿಂದ ಆವರಿಸಿಕೊಂಡು ಕಣ್ಣುಗುಡ್ಡಿನಂತೆ ಕಾಪಾಡಿದ್ದೂ;


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಸೈನ್ಯ ಸೈನ್ಯವಾಗಿ ಐಗುಪ್ತದೇಶದಿಂದ ಹೊರಗೆ ಬರಮಾಡಿದನು.


ಜನವಿರುವ ಊರನ್ನು ಸೇರುವಂತೆ ಅವರನ್ನು ಸರಿಯಾದ ದಾರಿಯಲ್ಲಿ ನಡಿಸಿದನು.


ನಿಮ್ಮ ಹೆಂಡರುಮಕ್ಕಳೂ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ಇರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.


ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.


ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.


ಅವರು ಸುಮಾರು ನಾಲ್ವತ್ತು ಸಾವಿರ ಭಟರಾಗಿದ್ದು ಯುದ್ಧಮಾಡುವದಕ್ಕಾಗಿ ಯೆಹೋವನ ಮುಂದೆ ಯೆರಿಕೋವಿನ ಬೈಲಿಗೆ ಬಂದರು.


ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರತಂದನು; ಆತನ ಕೃಪೆಯು ಶಾಶ್ವತವಾದದ್ದು.


ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ - ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕೆಂದು ಹೇಳಿ, ಹಾಗೆಯೇ ಮಾಡುತ್ತೇವೆಂಬದಾಗಿ ಅವರಿಂದ ಪ್ರಮಾಣ ಮಾಡಿಸಿದನು.


ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ ರಥಗಳೂ ಅವನ ರಾಹುತರೂ ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲ್ಯರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುವಾಗಲೇ ಅವರ ಹತ್ತಿರಕ್ಕೆ ಬಂದರು.


ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂವಿುಯು ಕಂಪಿಸಿತು; ಮೇಘಮಂಡಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿಬೆಟ್ಟವು ಕದಲಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು