ವಿಮೋಚನಕಾಂಡ 13:21 - ಕನ್ನಡ ಸತ್ಯವೇದವು J.V. (BSI)21 ಯೆಹೋವನು ಹಗಲುಹೊತ್ತಿನಲ್ಲಿ ದಾರಿತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿವೇಳೆಯಲ್ಲಿ ಬೆಳಕುಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವರ ಮುಂಭಾಗದಲ್ಲಿ ಹೋದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸರ್ವೇಶ್ವರ ಸ್ವಾಮಿ ಅವರಿಗೆ ಹಗಲು ಹೊತ್ತಿನಲ್ಲಿ ದಾರಿತೋರಿಸಲು ಮೇಘಸ್ತಂಭ ರೂಪದಲ್ಲೂ ರಾತ್ರಿವೇಳೆಯಲ್ಲಿ ಬೆಳಕನ್ನೀಯಲು ಅಗ್ನಿಸ್ತಂಭ ರೂಪದಲ್ಲೂ ಅವರ ಮುಂದೆ ಸಾಗಿದರು. ಹೀಗೆ ಅವರು ಹಗಲಿರುಳು ಪ್ರಯಾಣ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನು ದಾರಿಯನ್ನು ತೋರಿಸಿದನು. ಹಗಲಿನಲ್ಲಿ ಜನರನ್ನು ನಡಿಸಲು ಯೆಹೋವನು ಎತ್ತರವಾದ ಮೇಘಸ್ತಂಭವನ್ನು ಉಪಯೋಗಿಸಿದನು; ರಾತ್ರಿ ವೇಳೆಯಲ್ಲಿ ದಾರಿಯನ್ನು ತೋರಿಸಲು ಯೆಹೋವನು ಎತ್ತರವಾದ ಅಗ್ನಿಸ್ತಂಭವನ್ನು ಉಪಯೋಗಿಸಿದನು. ಈ ಬೆಂಕಿಯು ಅವರಿಗೆ ಬೆಳಕು ಕೊಟ್ಟಿದ್ದರಿಂದ ಅವರು ರಾತ್ರಿಯಲ್ಲಿ ಪ್ರಯಾಣ ಮಾಡಲು ಸಾಧ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ಅವರು ಹಗಲೂ ರಾತ್ರಿಯೂ ಪ್ರಯಾಣ ಮಾಡುವ ಹಾಗೆ ಯೆಹೋವ ದೇವರು ಹಗಲಲ್ಲಿ ಅವರಿಗೆ ದಾರಿ ತೋರಿಸುವುದಕ್ಕೆ ಮೇಘದ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವುದಕ್ಕೆ ಅಗ್ನಿಯ ಸ್ತಂಭದಲ್ಲಿಯೂ ಅವರ ಮುಂದೆ ಹೋದರು. ಅಧ್ಯಾಯವನ್ನು ನೋಡಿ |