Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:7 - ಕನ್ನಡ ಸತ್ಯವೇದವು J.V. (BSI)

7 ಆ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು ನಿಮ್ಮ ದೇಶದಲ್ಲೆಲ್ಲಾ ಹುಳಿಹಿಟ್ಟಾಗಲಿ ಹುಳಿಯಾಗಲಿ ನಿಮ್ಮ ಬಳಿಯಲ್ಲಿ ಇರಲೇಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಏಳು ದಿವಸವು ಹಿಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು. ಮಾತ್ರವಲ್ಲ ನಿಮ್ಮ ಬಳಿಯಲ್ಲಿ ಅಥವಾ ನಿಮ್ಮ ನಾಡಿನಲ್ಲಿ ಹುಳಿಯಾಗಲಿ ಹುಳಿ ಹಿಟ್ಟಾಗಲಿ ಇರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಹುಳಿಯಿರುವ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಬಾರದು. ನಿಮ್ಮ ದೇಶದಲ್ಲಿ ಹುಳಿಯಿರುವ ರೊಟ್ಟಿ ಇರಲೇಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆ ಏಳು ದಿನಗಳಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಅಲ್ಲದೆ ನಿಮ್ಮ ಬಳಿಯಲ್ಲಿ ಹುಳಿಯಾಗಲಿ ಇಲ್ಲವೆ ಹುಳಿಹಿಟ್ಟಾಗಲಿ ನಿಮ್ಮ ಯಾವ ಮೇರೆಯಲ್ಲೂ ಕಾಣಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:7
6 ತಿಳಿವುಗಳ ಹೋಲಿಕೆ  

ಆ ಏಳು ದಿನಗಳೂ ನಿಮ್ಮ ಮನೆಗಳಲ್ಲಿ ಹುಳಿಯಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಲಿ ಸ್ವದೇಶದವನಾಗಲಿ ಇಸ್ರಾಯೇಲ್ ಜನರೊಳಗಿಂದ ತೆಗೆದುಹಾಕಲ್ಪಡಬೇಕು.


ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಎಂದು ಹೇಳಲು ಅವರು -


ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.


ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು.


ಆ ಏಳು ದಿವಸವೂ ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆದ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು.


ಮರುದಿವಸದಿಂದ ಆ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸ ತೊಡಗಿದರು. ಹೇಗಂದರೆ ಅದೇ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ ಸುಟ್ಟ ತೆನೆಗಳನ್ನೂ ತಿಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು