Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:9 - ಕನ್ನಡ ಸತ್ಯವೇದವು J.V. (BSI)

9 ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಾದದರಿಂದ ಆತನ ನಿಯಮವನ್ನು ಕುರಿತು ನೀವು ಮಾತಾಡಬೇಕೆಂಬದಕ್ಕಾಗಿ ಈ ಆಚಾರವು ನಿಮಗೆ ಕೈಯಲ್ಲಿ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಈಜಿಪ್ಟಿನಿಂದ ಹೊರಗೆ ಬರಮಾಡಿದ್ದಾರೆ. ಆದ್ದರಿಂದ ದೇವರ ನಿಯಮವು ನಿಮ್ಮ ಬಾಯಲ್ಲಿ ಇರುವಂತೆ, ಈ ಆಚರಣೆಯು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯಲ್ಲಿ ಜ್ಞಾಪಕಾರ್ಥವಾಗಿಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:9
38 ತಿಳಿವುಗಳ ಹೋಲಿಕೆ  

ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು.


ಆ ಗೊಂಡೆಗಳ ಉಪಯೋಗವೇನಂದರೆ - ನೀವು ಅವುಗಳನ್ನು ನೋಡುವಾಗ ಯೆಹೋವನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ನಡಿಸಬೇಕು, ಮತ್ತು ನೀವು ಪೂರ್ವದಲ್ಲಿ ನನಗೆ ದ್ರೋಹಿಗಳಾಗಿ ಮನಸ್ಸಿಗೂ ಕಣ್ಣಿಗೂ ತೋರಿದಂತೆ ದಾರಿತಪ್ಪಿ ನಡೆದ ಪ್ರಕಾರ ಇನ್ನು ನಡೆಯದೆ


ಯೆಹೋವನು ಭುಜಬಲದಿಂದ ನಮ್ಮನ್ನು ಐಗುಪ್ತದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವದಕ್ಕೆ ಈ ಪದ್ಧತಿಯು ಕೈಗೆ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.


ಆ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು. ಅದರಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಮಾಡಬೇಕು. ಅದನ್ನು ಶಾಶ್ವತನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬೇಡ. ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಅನ್ನುತ್ತದೆ. ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; ನಿಮ್ಮಲ್ಲಿ ಆವೇಶಿಸಿರುವ ನನ್ನ ಆತ್ಮವೂ ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ ನಿಮ್ಮ ಬಾಯಿಂದಾಗಲಿ ನಿಮ್ಮ ಸಂತತಿಯ ಬಾಯಿಂದಾಗಲಿ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರಿಗೆ ಕಾಣಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕ ಪಟ್ಟಿಗಳನ್ನು ಅಗಲಮಾಡುತ್ತಾರೆ, ಗೊಂಡೆಗಳನ್ನು ಉದ್ದಮಾಡುತ್ತಾರೆ.


ಈ ವಾಕ್ಯವು ನಿಮಗೆ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವದಕ್ಕೆ ಅವಕಾಶವುಂಟಷ್ಟೆ.


ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು.


ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳುವದರಿಂದ ಅವಳಿಗೆ ಕೊಲೆ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿಸುವವು; ಅವಳು ಬೆಂಕಿಯಿಂದ ಸುಟ್ಟುಹೋಗುವಳು; ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ;


ಯೆಹೋವನು ತನ್ನ ಸೈನ್ಯದ ಮುಂದೆ ದನಿಗೈಯುತ್ತಾನೆ; ಆತನ ದಂಡು ಬಹು ದೊಡ್ಡದು; ತನ್ನ ಮಾತನ್ನು ನೆರವೇರಿಸಿಕೊಳ್ಳುವಾತನು ಬಲಿಷ್ಟನಾಗಿದ್ದಾನೆ; ಯೆಹೋವನ ದಿನವು ಮಹತ್ತರವೂ ಅತಿ ಭಯಂಕರವೂ ಆಗಿದೆ; ಅದನ್ನು ತಾಳಿಕೊಳ್ಳುವವರು ಯಾರು?


ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತು ಹಾಕುತ್ತಿದ್ದೆನು!


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿದ್ದೇನೆ; ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.


ಆಹಾ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು; ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದಿದೆ.


ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.


ಮಗನೇ, ಸುಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.


ಅವು ನಿನ್ನ ತಲೆಗೆ ಅಂದದ ಪುಷ್ಪ ಕಿರೀಟ; ಕೊರಳಿಗೆ ಹಾರ.


ನಿನ್ನ ಭುಜವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡಿಸುತ್ತದೆ.


ಅವರು ನಿನ್ನ ಸೇವಕರೂ ನೀನು ನಿನ್ನ ಮಹಾಶಕ್ತಿಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.


ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು.


ನಿನ್ನ ಹೃದಯದ ಮೇಲೆ, ನಿನ್ನ ಕೈಯಲ್ಲಿ, ನನ್ನನ್ನು ಮುದ್ರೆಯನ್ನಾಗಿ ಧರಿಸಿಕೋ. ಪ್ರೀತಿಯು ಮರಣದಷ್ಟು ಬಲವಾಗಿದೆ, [ಪ್ರೀತಿದ್ರೋಹದಿಂದ ಹುಟ್ಟುವ] ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಅದು ಯೆಹೋವನ ರೋಷಾಗ್ನಿಯು.


ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ ಬಾಣವು ತನ್ನ ಕಾಳಿಜವನ್ನು ತಿವಿಯುವ ಕಡೆಗೆ ತಟ್ಟನೆ ಅವಳ ಹಿಂದೆ ಹೋಗುತ್ತಾನೆ.


ಆದಕಾರಣ ನಾನು ಕೈಚಾಚಿ ಐಗುಪ್ತದೇಶದ ಮಧ್ಯದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು; ಆಮೇಲೆ ಅರಸನು ನಿಮ್ಮನ್ನು ಬಿಡುವನು.


ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನನ್ನ ಜನರಾಗಿರುವ ಇಸ್ರಾಯೇಲ್ಯರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರ ತರುವೆನು.


ಇನ್ನು ಮೇಲೆ ನಿಮ್ಮ ಮಕ್ಕಳು - ಇದು ಯಾತಕ್ಕೆ ಎಂದು ವಿಚಾರಿಸುವಾಗ ನೀವು ಅವರಿಗೆ - ನಾವು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ಯೆಹೋವನು ಭುಜಬಲದಿಂದ ನಮ್ಮನ್ನು ಬಿಡಿಸಿದನು.


ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು; ಆತನ ಕೃಪೆಯು ಶಾಶ್ವತವಾದದ್ದು.


[ಅನ್ಯಜನರಲ್ಲಿ] ಒಬ್ಬನು - ನಾನು ಯೆಹೋವನ ಭಕ್ತನು ಎಂದು ಹೇಳಿಕೊಳ್ಳುವನು; ಇನ್ನೊಬ್ಬನು ಯಾಕೋಬ್ಯನು ಎನಿಸಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಯೆಹೋವದಾಸನು ಎಂದು ಬರೆದುಕೊಂಡು ಇಸ್ರಾಯೇಲ್ಯನೆಂಬ ಬಿರುದನ್ನು ಧರಿಸಿಕೊಳ್ಳುವನು.


ನಾನೂರಮೂವತ್ತು ವರುಷಗಳು ಕಳೆದನಂತರ ಅದೇ ದಿವಸದಲ್ಲಿ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಟುಹೋದವು.


ಐಗುಪ್ತದೇಶದಲ್ಲಿ ನೀವೂ ದಾಸತ್ವದಲ್ಲಿದ್ದದ್ದನ್ನೂ ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂಬದನ್ನು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.


ನೀವು ಅವರಿಗೆ - ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆ ಮಾಡಿದನು;


ತಮ್ಮ ಪಿತೃಗಳನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಯೆಹೋವನನ್ನು ರೇಗಿಸಿದರು.


ಇಸ್ರಾಯೇಲ್ಯರನ್ನು ಅವರ ಮಧ್ಯದಿಂದ ಹೊರತಂದನು; ಆತನ ಕೃಪೆಯು ಶಾಶ್ವತವಾದದ್ದು.


ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು