Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:10 - ಕನ್ನಡ ಸತ್ಯವೇದವು J.V. (BSI)

10 ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲ್ಯರು ಕಣ್ಣೆತ್ತಿ ತಮ್ಮ ಹಿಂದೆ ಹೊರಟುಬಂದಿದ್ದ ಐಗುಪ್ತ್ಯರನ್ನು ಕಂಡು ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಫರೋಹನು ಸಮೀಪಿಸುತ್ತಿರುವುದನ್ನು ಇಸ್ರಯೇಲರು ಕಣ್ಣೆತ್ತಿ ನೋಡಿದರು. ತಮ್ಮನ್ನು ಬೆನ್ನಟ್ಟಿ ಬಂದಿದ್ದ ಈಜಿಪ್ಟಿನವರನ್ನು ಕಂಡು ಬಹಳವಾಗಿ ಭಯಪಟ್ಟು ಸರ್ವೇಶ್ವರನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಫರೋಹನೂ ಅವನ ಸೈನ್ಯವೂ ತಮ್ಮ ಕಡೆಗೆ ಬರುತ್ತಿರುವುದನ್ನು ಇಸ್ರೇಲರು ಕಂಡು ಬಹಳ ಭಯಪಟ್ಟರು. ಅವರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಫರೋಹನು ಸಮೀಪಕ್ಕೆ ಬರುವುದನ್ನು ಇಸ್ರಾಯೇಲರು ಕಣ್ಣೆತ್ತಿ ನೋಡಿದರು. ಈಜಿಪ್ಟಿನವರು ಅವರ ಹಿಂದೆ ಬರುತ್ತಿರುವುದನ್ನು ಕಂಡು ಇಸ್ರಾಯೇಲರು ಬಹಳ ಭಯಪಟ್ಟು ಯೆಹೋವ ದೇವರಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:10
23 ತಿಳಿವುಗಳ ಹೋಲಿಕೆ  

ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಕಷ್ಟದಿಂದ ಬಿಡಿಸಿದನು.


ಯೆಹೋವನು ನೀತಿವಂತರ ಕೂಗನ್ನು ಕೇಳಿ ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.


ಐಗುಪ್ತದೇಶದಲ್ಲಿ ನಮ್ಮ ಪಿತೃಗಳಿಗಿದ್ದ ಕಷ್ಟವನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಲಾಲಿಸಿದಿ.


ಆಗ ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನುಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತ್ಯರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬದಕ್ಕೆ ನೀವು ಸಾಕ್ಷಿಗಳಾಗಿದ್ದೀರಿ.


ಆದರೆ ಆತನು ಕಷ್ಟದಲ್ಲಿದ್ದ ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.


ಭಯಪಡುವದಕ್ಕೆ ಕಾರಣವಿಲ್ಲದಿದ್ದರೂ ಅವರು ಫಕ್ಕನೆ ಭಯಭ್ರಾಂತರಾದರು; ನಿಮಗೆ ಮುತ್ತಿಗೆಹಾಕಿದವರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅಪಜಯಪಡಿಸಿದಿರಿ.


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲ್ಯರ ಅರಸನೆಂದು ನೆನಸಿ ಅವನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ದೇವರಾದ ಯೆಹೋವನು ಅವನಿಗೆ ನೆರವಾಗಿ ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದನು.


ಪ್ರೀತಿಯು ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯು ಯಾತನೆಯನ್ನು ಹೊಂದುತ್ತಾ ಇರುವದು; ಪೂರ್ಣಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.


ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವದು!


ಯೆಹೋವನೇ, [ನಿನ್ನ ಜನರು] ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಆಶ್ರಯಿಸಿದರು, ನಿನ್ನ ಶಿಕ್ಷೆಗೆ ಗುರಿಯಾಗಿ ಜಪಮಾಡಿದರು.


ಅರಾಮ್ಯರು ಎಫ್ರಾಯೀಮ್ಯರನ್ನು ಹೊಂದಿಕೊಂಡಿದ್ದಾರೆಂಬ ಸುದ್ದಿಯು ಅರಮನೆಗೆ ಮುಟ್ಟಿದಾಗ ಅರಸನ ಮನವೂ ಪ್ರಜೆಯ ಮನವೂ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.


ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಕಷ್ಟದಿಂದ ಹೊರತಂದನು.


ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.


ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.


ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲ್ಯರಿಗಾಗಿ ಒಂದು ನಿಯಮವನ್ನು ನಿರ್ಣಯಮಾಡಿ ಅವರನ್ನು ಪರೀಕ್ಷಿಸಿ ಹೀಗಂದನು -


ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದಿರಿ.


ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.


ಫರೋಹನು ಇಸ್ರಾಯೇಲ್ಯರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟಾಗ ಫಿಲಿಷ್ಟಿಯರ ದೇಶದೊಳಗಣ ಮಾರ್ಗ ಹತ್ತಿರವಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ನಡಿಸದೆ ಕೆಂಪುಸಮುದ್ರದ ಬಳಿಯಲ್ಲಿರುವ ಮರಳು ಕಾಡಿನ ದಾರಿಯಲ್ಲಿಯೇ ಸುತ್ತಾಗಿ ನಡಿಸಿಕೊಂಡುಹೋದನು.


ನಿಮ್ಮ ಪಿತೃಗಳು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪುಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತ್ಯರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು