Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:12 - ಕನ್ನಡ ಸತ್ಯವೇದವು J.V. (BSI)

12 ನಾವು ಐಗುಪ್ತದೇಶದಲ್ಲಿದ್ದಾಗಲೇ - ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು ಎಂಬದಾಗಿ ನಿನಗೆ ಹೇಳಲಿಲ್ಲವೇ? ನಾವು ಅರಣ್ಯದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವದೇ ವಾಸಿಯಲ್ಲವೇ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾವು ಈಜಿಪ್ಟಿನಲ್ಲಿರುವಾಗಲೇ, ‘ನಮ್ಮ ಗೊಡವೆಗೆ ಬರಬೇಡಿ, ನಾವು ಈಜಿಪ್ಟಿನವರಿಗೆ ಗುಲಾಮರಾಗಿಯೇ ಇರುತ್ತೇವೆ,” ಎಂದು ನಿಮಗೆ ನಾವು ಹೇಳಲಿಲ್ಲವೆ? ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಗುಲಾಮರಾಗಿರುವುದೇ ಮೇಲಲ್ಲವೇ?” ಎಂದು ದೂರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾವು ನಿನಗೆ ಈಜಿಪ್ಟಿನಲ್ಲೇ, ‘ದಯಮಾಡಿ ನಮ್ಮ ಗೊಡವೆಗೆ ಬರಬೇಡ. ನಾವು ಇಲ್ಲಿದ್ದುಕೊಂಡು ಈಜಿಪ್ಟಿನವರ ಸೇವೆಮಾಡಲು ಬಿಡು’ ಎಂದು ಹೇಳಿದ್ದೆವು. ನಾವು ಇಲ್ಲಿಗೆ ಬಂದು ಅರಣ್ಯದಲ್ಲಿ ಸಾಯುವುದಕ್ಕಿಂತ, ಅಲ್ಲೇ ಗುಲಾಮರಾಗಿ ಇದ್ದಿದ್ದರೆ ಒಳ್ಳೆಯದಾಗಿರುತ್ತಿತ್ತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾವು ಈಜಿಪ್ಟ್ ದೇಶದಲ್ಲಿದ್ದಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ, ನಾವು ಈಜಿಪ್ಟಿನವರಿಗೆ ಸೇವೆಮಾಡುತ್ತೇವೆ,’ ಎಂದು ನಿನಗೆ ಹೇಳಲಿಲ್ಲವೇ? ನಾವು ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಸೇವೆ ಮಾಡುವುದೇ ಒಳ್ಳೆಯದಾಗಿತ್ತಲ್ಲಾ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:12
11 ತಿಳಿವುಗಳ ಹೋಲಿಕೆ  

ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು.


ಮೋಶೆ ಈ ಮಾತುಗಳನ್ನು ಇಸ್ರಾಯೇಲ್ಯರಿಗೆ ತಿಳಿಸಿದನು. ಆದರೂ ಅವರ ಮನಸ್ಸು ಕುಗ್ಗಿ ಹೋದದರಿಂದಲೂ ಕಠಿಣವಾಗಿ ಸೇವೆಮಾಡಬೇಕಾದದರಿಂದಲೂ ಅವರು ಅವನ ಮಾತಿಗೆ ಕಿವಿಗೊಡಲೇ ಇಲ್ಲ.


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ಫರೋಹನೂ ಅವನ ಸೇವಕರೂ ನಮ್ಮನ್ನು ನೋಡಿ ಹೇಸಿಕೊಳ್ಳುವಂತೆ ನೀವು ಮಾಡಿದಿರಿ; ನಮ್ಮನ್ನು ಸಂಹಾರಮಾಡುವದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟ ಹಾಗಾಯಿತು; ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ ಎಂದು ಹೇಳಿದರು.


ಈಗ ಕೇಳು, ಇಸ್ರಾಯೇಲ್ಯರ ಕೂಗು ನನಗೆ ಮುಟ್ಟಿತು; ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.


ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ, ನನ್ನನ್ನು ಕಾಡಬೇಡ ಎಂದು ಹೇಳಿದನು.


ಆ ದೆವ್ವವು - ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ಕೂಗಿ ಹೇಳಿತು.


ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.


ಫರೋಹನು ಇಸ್ರಾಯೇಲ್ಯರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟಾಗ ಫಿಲಿಷ್ಟಿಯರ ದೇಶದೊಳಗಣ ಮಾರ್ಗ ಹತ್ತಿರವಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ನಡಿಸದೆ ಕೆಂಪುಸಮುದ್ರದ ಬಳಿಯಲ್ಲಿರುವ ಮರಳು ಕಾಡಿನ ದಾರಿಯಲ್ಲಿಯೇ ಸುತ್ತಾಗಿ ನಡಿಸಿಕೊಂಡುಹೋದನು.


ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು