ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನಿನ್ನ ಕೊಲನ್ನು ತೆಗೆದುಕೊಂಡು ಐಗುಪ್ತ ದೇಶದಲ್ಲಿರುವ ಹೊಳೆ ಕಾಲುವೆ ಕೆರೆ ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು ಎಂದು ಹೇಳಬೇಕು; ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವದು; ಐಗುಪ್ತ ದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರೂ ರಕ್ತವಾಗುವದು ಅಂದನು.
ಅಷ್ಟರಲ್ಲಿ ಯೆಹೋವನು ಮೋಶೆಗೆ - ಸಮುದ್ರದ ಮೇಲೆ ನಿನ್ನ ಕೈ ಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ ಅವರ ರಥಗಳನ್ನೂ ರಾಹುತರನ್ನೂ ಮುಣುಗಿಸುವದೆಂದು ಹೇಳಿದನು. ಮೋಶೆ ಸಮುದ್ರದ ಮೇಲೆ ಕೈಚಾಚಿದನು.
ಸೇನಾಧೀಶ್ವರನಾದ ಯೆಹೋವನು ಓರೇಬನ ಬಂಡೆಯ ಹತ್ತಿರ ವಿುದ್ಯಾನ್ಯರನ್ನು ಹತಮಾಡಿದಂತೆ ಅವರ ಮೇಲೆಯೂ ಕೊರಡೆಯನ್ನು ಬೀಸುವನು; ಆತನು ದಂಡವನ್ನು ಸಮುದ್ರದ ಮೇಲೆ ಚಾಚಿ ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
ಫರೋಹನು ನಿಮಗೆ - ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕೆಂದು ಹೇಳಿದರೆ ಮೋಶೆಯು ಆರೋನನಿಗೆ - ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಬೀಸಾಡು ಎಂದು ಹೇಳಬೇಕು, ಅದು ಸರ್ಪವಾಗುವದು ಎಂದು ಆಜ್ಞಾಪಿಸಿದನು.
ಅದಕ್ಕೆ ಯೆಹೋವನು - ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲ್ಯರ ಹಿರಿಯರಲ್ಲಿ ಕೆಲವರನ್ನು ಕರಕೊಂಡು ಜನರ ಮುಂದೆ ಹೊರಟು [ನಾನು ತೋರಿಸುವ ಸ್ಥಳಕ್ಕೆ] ಹೋಗು.
ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನ್ನೆದುರಾಗಿ ನಿಲ್ಲುವೆನು. ನೀನು ಆ ಬಂಡೆಯನ್ನು ಹೊಡೆದಾಗ ಅದರಿಂದ ನೀರು ಹೊರಡುವದು, ಜನರು ಕುಡಿಯುವರು ಎಂದು ಮೋಶೆಗೆ ಅಪ್ಪಣೆ ಕೊಡಲಾಗಿ ಮೋಶೆ ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
ಆಗ ಎಲೀಷನು ಗೇಹಜಿಗೆ - ನೀನು ನಡು ಕಟ್ಟಿಕೊಂಡು ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮೋರೆಯ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಅವರ ವಂದನೆಯನ್ನೂ ಸ್ವೀಕರಿಸಬೇಡ ಎಂದು ಹೇಳಿ ಕಳುಹಿಸಿದನು.
ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳಿಗೆ ಸಿಟ್ಟುಗೊಂಡಿದ್ದೀಯಾ? ಸಮುದ್ರದ ಮೇಲೆ ಕೋಪವೋ? ಏಕೆ ನಿನ್ನ ಅಶ್ವಗಳ ಮೇಲೆ ಆರೂಢನಾಗಿ ನಿನ್ನ ಜಯರಥಗಳಲ್ಲಿ ಆಸೀನನಾಗಿ ಬರುತ್ತಿದ್ದೀ?