ವಿಮೋಚನಕಾಂಡ 14:26 - ಕನ್ನಡ ಸತ್ಯವೇದವು J.V. (BSI)26 ಅಷ್ಟರಲ್ಲಿ ಯೆಹೋವನು ಮೋಶೆಗೆ - ಸಮುದ್ರದ ಮೇಲೆ ನಿನ್ನ ಕೈ ಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ ಅವರ ರಥಗಳನ್ನೂ ರಾಹುತರನ್ನೂ ಮುಣುಗಿಸುವದೆಂದು ಹೇಳಿದನು. ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಷ್ಟರಲ್ಲಿ ಸರ್ವೇಶ್ವರ, “ಸಮುದ್ರದ ಮೇಲೆ ನಿನ್ನ ಕೈಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಈಜಿಪ್ಟಿನವರನ್ನೂ ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು,” ಎಂದು ಮೋಶೆಗೆ ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚು; ನೀರು ಈಜಿಪ್ಟಿನವರ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಕೊಳ್ಳುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟಿನವರನ್ನೂ ಅವರ ರಥಗಳ ಕುದುರೆಯ ಸವಾರರನ್ನೂ ಸಮುದ್ರವು ಮುಳುಗಿಸುವಂತೆ ಸಮುದ್ರದ ಮೇಲೆ ಕೈಚಾಚು,” ಎಂದರು. ಅಧ್ಯಾಯವನ್ನು ನೋಡಿ |
ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನಿನ್ನ ಕೊಲನ್ನು ತೆಗೆದುಕೊಂಡು ಐಗುಪ್ತ ದೇಶದಲ್ಲಿರುವ ಹೊಳೆ ಕಾಲುವೆ ಕೆರೆ ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು ಎಂದು ಹೇಳಬೇಕು; ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವದು; ಐಗುಪ್ತ ದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರೂ ರಕ್ತವಾಗುವದು ಅಂದನು.