Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:28 - ಕನ್ನಡ ಸತ್ಯವೇದವು J.V. (BSI)

28 ನೀರು ಮೊದಲಿನಂತೆ ಬಂದು ಆ ರಥಗಳನ್ನೂ ರಾಹುತರನ್ನೂ ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಣುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನೀರು ಮೊದಲಿನಂತೆ ಬಂದು ಆ ರಥಗಳನ್ನು, ರಾಹುತರನ್ನು ಹಾಗು ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನು ಮುಳುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಬಿಟ್ಟಿತು. ಸಮುದ್ರದೊಳಗೆ ಹೋಗಿದ್ದ ಇಸ್ರೇಲರನ್ನು ಬೆನ್ನಟ್ಟಿದ ಫರೋಹನ ಸೈನ್ಯವೆಲ್ಲಾ ನಾಶವಾಯಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀರು ತಿರುಗಿಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಹೀಗೆ ಒಬ್ಬರೂ ಉಳಿಯದಂತೆ ಮುಳುಗಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:28
16 ತಿಳಿವುಗಳ ಹೋಲಿಕೆ  

ಆತನು ಸುರಕ್ಷಿತವಾಗಿ ನಡಿಸಿದ್ದರಿಂದ ಅವರು ಅಂಜಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು.


ನಿನ್ನ ಪ್ರಜೆಯ ರಕ್ಷಣೆಗೆ, ನಿನ್ನ ಅಭಿಷಿಕ್ತನ ಉದ್ಧಾರಕ್ಕೆ ಹೊರಟಿದ್ದೀ; ತಲೆಯನ್ನು ಕುತ್ತಿಗೆಯ ಬುಡದವರೆಗೆ ಹೊಡೆದುಹಾಕಿದ ಹಾಗೆ ತಳಾದಿಯು ಬೈಲಾಗುವಷ್ಟರ ಮಟ್ಟಿಗೆ ನೀನು ದುಷ್ಟನ ಮನೆಯನ್ನು ಹೊಡೆದಿದ್ದೀ. ಸೆಲಾ.


ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪುಸಮುದ್ರದಲ್ಲಿ ಕೆಡವಿಬಿಟ್ಟನು; ಆತನ ಕೃಪೆಯು ಶಾಶ್ವತವಾದದ್ದು.


ನಂಬಿಕೆಯಿಂದಲೇ ಇಸ್ರಾಯೇಲ್ಯರು ಕೆಂಪುಸಮುದ್ರವನ್ನು ಒಣಭೂವಿುಯನ್ನು ದಾಟುವಂತೆ ದಾಟಿದರು; ಐಗುಪ್ತದೇಶದವರು ಅದನ್ನು ದಾಟುವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.


ನಮ್ಮ ಪಿತೃಗಳು ಸಮುದ್ರ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದಿ. ಅವರನ್ನು ಹಿಂದಟ್ಟುವವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿ ಬಿಟ್ಟಿ.


ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ.


ಐಗುಪ್ತ್ಯರ ದಂಡು ಅಂದರೆ ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದಟ್ಟಿ ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ;


ಆದರೆ ನೀನು ಉಸುರುಗಾಳಿಯಿಂದ ಊದಲು ಸಮುದ್ರವು ಅವರನ್ನು ಮುಚ್ಚಿತು, ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು.


ಆದರೆ ಮೋಶೆ ಆ ಜನರಿಗೆ - ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ.


[ಈ ಜಯಗೀತಕ್ಕೆ ಕಾರಣವೇನಂದರೆ -] ಫರೋಹನ ಕುದುರೆಗಳೂ ರಥಗಳೂ ರಾಹುತರೂ ಸಮುದ್ರದಲ್ಲಿ ಹೊಕ್ಕು ನಡೆಯಲು ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರಮಾಡಿ ಮುಳುಗಿಸಿಬಿಟ್ಟನು; ಇಸ್ರಾಯೇಲ್ಯರಾದರೋ ಸಮುದ್ರದ ಮಧ್ಯದೊಳಗೆ ಒಣನೆಲದಲ್ಲಿ ನಡೆದುಹೋದರು.


ಬಾರಾಕನು ಅವನ ಸೈನ್ಯರಥಗಳನ್ನು ಮ್ಲೇಚ್ಫರ ಹರೋಷೆತಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲಾ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.


ನೀರು ಪ್ರಬಲವಾಗಿ ಬಲು ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು.


ಇದಲ್ಲದೆ ಅವನ ಸಂಗಡ ರಥಗಳೂ ಕುದುರೆಗಳೂ ಸಹ ಹೋದವು. ಹೊರಟುಹೋದವರು ಬಹು ಮಂದಿ.


ಕೆಂಪುಸಮುದ್ರದ ಬಳಿಯಲ್ಲಿ ಘೋರ ಕೃತ್ಯಗಳನ್ನೂ ನಡಿಸಿದ ತಮ್ಮ ರಕ್ಷಕನಾದ ದೇವರನ್ನು ಮರೆತೇಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು