Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:29 - ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲ್ಯರೋ ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು; ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ಇಸ್ರೇಲರು ಒಣನೆಲದಲ್ಲಿ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿದ್ದ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:29
19 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.


ಆಕಾಶಮಂಡಲವನ್ನು ಹರಡಿ ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟಿಯಾ? ನಾಶಮಾಡಬೇಕೆಂದು [ಬಾಣವನ್ನು] ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ತಾನೇ ಇದೆ?


ಸಮುದ್ರವನ್ನೂ ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತಜನರು ಹಾದುಹೋಗುವದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದ ಬಾಹು ನೀನೇ ಹೌದು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.


ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ಸಹೋದರರೇ, ಮುಂದಿನ ಸಂಗತಿಯಲ್ಲಿ ನೀವು ಲಕ್ಷ್ಯವಿಡಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅದೇನಂದರೆ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು;


ನೀನು ಸಿಟ್ಟಿನಿಂದ ಮುಸುಗರೆದಾಗ ಸಮುದ್ರದ ನೀರು ಒಡ್ಡಿನಂತಾಯಿತು. ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು. ಸಾಗರ ಗರ್ಭದೊಳಗಣ ಜಲವು ಗಟ್ಟಿಯಾಯಿತು.


[ಈ ಜಯಗೀತಕ್ಕೆ ಕಾರಣವೇನಂದರೆ -] ಫರೋಹನ ಕುದುರೆಗಳೂ ರಥಗಳೂ ರಾಹುತರೂ ಸಮುದ್ರದಲ್ಲಿ ಹೊಕ್ಕು ನಡೆಯಲು ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರಮಾಡಿ ಮುಳುಗಿಸಿಬಿಟ್ಟನು; ಇಸ್ರಾಯೇಲ್ಯರಾದರೋ ಸಮುದ್ರದ ಮಧ್ಯದೊಳಗೆ ಒಣನೆಲದಲ್ಲಿ ನಡೆದುಹೋದರು.


ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶನಮಾಡುವನು; ಯೂಫ್ರೇಟೀಸ್ ನದಿಯ ಮೇಲೆ ಕೈ ಝಾಡಿಸಿ ತನ್ನ ಬಿಸಿಗಾಳಿಯಿಂದ ಅದನ್ನು ಏಳು ತೊರೆಗಳನ್ನಾಗಿ ಒಡೆದು ಜನರು ಕೆರ ಮೆಟ್ಟಿ ದಾಟುವಂತೆ ಮಾಡುವನು.


ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು; ಇಬ್ಬರೂ ಒಣನೆಲದ ಮೇಲೆ ದಾಟಿ ಹೋದರು.


ನಮ್ಮ ಪಿತೃಗಳು ಸಮುದ್ರ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದಿ. ಅವರನ್ನು ಹಿಂದಟ್ಟುವವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿ ಬಿಟ್ಟಿ.


ಆತನು ಸಮುದ್ರವನ್ನು ಭೇದಿಸಿ ಅದರ ನೀರನ್ನು ರಾಶಿಯಂತೆ ನಿಲ್ಲಿಸಿ ಅವರನ್ನು ದಾಟಿಸಿದನು.


ಆತನು ಗದರಿಸಲು ಕೆಂಪು ಸಮುದ್ರವು ಒಣಗಿ ಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.


ಆತನು ಕೆಂಪುಸಮುದ್ರವನ್ನು ಭೇದಿಸಿದನು; ಆತನ ಕೃಪೆಯು ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು