Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:3 - ಕನ್ನಡ ಸತ್ಯವೇದವು J.V. (BSI)

3 ಫರೋಹನು ಅದನ್ನು ಕಂಡು - ಇಸ್ರಾಯೇಲ್ಯರಿಗೆ ದಾರಿತಪ್ಪಿತು, ಎಲ್ಲಾ ಕಡೆಯಲ್ಲಿಯೂ ಅರಣ್ಯವು ಅವರನ್ನು ಸುತ್ತಿಕೊಂಡದೆ ಅಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಫರೋಹನು ಅದನ್ನು ಕಂಡು, ‘ಇಸ್ರಯೇಲರಿಗೆ ದಾರಿತಪ್ಪಿತು, ಸುತ್ತಲೂ ಮರುಭೂಮಿ ಅವರನ್ನು ಆವರಿಸಿದೆ” ಎಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲರು ಅರಣ್ಯದಲ್ಲಿ ದಾರಿ ತಪ್ಪಿದರು; ಅವರಿಗೆ ಹೋಗಲು ಯಾವ ಸ್ಥಳವೂ ಇರುವುದಿಲ್ಲ ಎಂದು ಫರೋಹನು ಭಾವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಫರೋಹನು ಇಸ್ರಾಯೇಲರ ವಿಷಯದಲ್ಲಿ, ‘ಅವರು ಗಲಿಬಿಲಿಗೊಂಡು ಮರುಭೂಮಿಯನ್ನು ಸುತ್ತುವರಿದ ಪ್ರದೇಶದಲ್ಲಿ ಅತ್ತಿತ್ತ ಹೋಗುತ್ತಿರುವರು,’ ಎಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:3
15 ತಿಳಿವುಗಳ ಹೋಲಿಕೆ  

ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇವಿುಸಿದ್ದನ್ನೇ ನಡಿಸಿದರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನಕಾಲದಲ್ಲಿ ಬಹುವರುಷ ಪ್ರವಾದಿಸುತ್ತಾ ನಾನು ಒಬ್ಬನನ್ನು ಇಸ್ರಾಯೇಲ್ಯರ ಮೇಲೆ ಬೀಳಮಾಡುವೆನು ಎಂದು ಮುಂತಿಳಿಸಿದ್ದರಷ್ಟೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ.


ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ ನೀನು ಅರಿಯದೆ ಇರುವಂಥದು ಒಂದೂ ಇಲ್ಲ.


ನಾನು ಕೂತುಕೊಳ್ಳುವದೂ ಏಳುವದೂ ನಿನಗೆ ಗೊತ್ತದೆ; ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತೀ;


ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ ಎಂದು ಹೇಳಿಕೊಳ್ಳುತ್ತಾರೆ.


ಅನೇಕರು ನನ್ನ ವಿಷಯದಲ್ಲಿ - ಅವನಿಗೆ ದೇವರಿಂದ ಸಹಾಯವು ಆಗುವದೇ ಇಲ್ಲವೆಂದು ಹೇಳಿಕೊಳ್ಳುತ್ತಾರೆ. ಸೆಲಾ.


ಆದದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ನಿಜವಾದ ವರ್ತಮಾನವನ್ನು ನನಗೆ ಮುಟ್ಟಿಸಿರಿ. ನಾನು ನಿಮ್ಮ ಸಂಗಡ ಬರುವೆನು; ಅವನು ದೇಶದಲ್ಲಿರುವದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾದರೂ ಹುಡುಕಿ ಅವನನ್ನು ಹಿಡಿಯುವೆನು ಅಂದನು.


ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿಕದಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ; ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು


ಸಂಸೋನನು ಬಂದಿರುವದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು; ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು; ಆಗ ನಾನು ಫರೋಹನಲ್ಲಿಯೂ ಅವನ ಸೈನ್ಯದಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ನಾನೇ ಯೆಹೋವನೆಂಬದು ಐಗುಪ್ತ್ಯರಿಗೆ ತಿಳಿದುಬರುವದು ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು