ವಿಮೋಚನಕಾಂಡ 14:7 - ಕನ್ನಡ ಸತ್ಯವೇದವು J.V. (BSI)7 ಶ್ರೇಷ್ಠವಾದ ಆರುನೂರು ರಥಗಳನ್ನೂ ಐಗುಪ್ತದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಹೋದನು. ಆ ಎಲ್ಲಾ ರಥಗಳಲ್ಲಿ ಭಟರಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಶ್ರೇಷ್ಠವಾದ ಆರುನೂರು ರಥಗಳನ್ನೂ, ಐಗುಪ್ತ ದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಬೆನ್ನಟ್ಟಿ ಹೋದನು. ಆ ಎಲ್ಲಾ ರಥಗಳಲ್ಲಿ ಅಧಿಪತಿಗಳನ್ನೂ ಕರೆಸಿ ಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈಜಿಪ್ಟಿನ ಎಲ್ಲ ರಥಗಳನ್ನೂ ಆರುನೂರು ಶ್ರೇಷ್ಠರಥಗಳನ್ನು ತೆಗೆದುಕೊಂಡು ಹೋದನು. ಈ ಎಲ್ಲ ರಥಗಳಲ್ಲಿ ಸೇನಾನಿಗಳಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಫರೋಹನು ತನ್ನ ಆರುನೂರು ರಥಗಳನ್ನೂ ಅವುಗಳ ಚಾಲಕರನ್ನೂ ಮತ್ತು ಅವುಗಳೊಡನೆ ಈಜಿಪ್ಟಿನ ಇತರ ರಥಗಳನ್ನೂ ತೆಗೆದುಕೊಂಡನು. ಪ್ರತಿಯೊಂದು ರಥದಲ್ಲಿ ಒಬ್ಬ ದಳಪತಿ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಅವನು ಆರಿಸಿಕೊಂಡ ಅತ್ಯುತ್ತಮ ಆರುನೂರು ರಥಗಳನ್ನೂ, ಈಜಿಪ್ಟಿನ ಎಲ್ಲಾ ರಥಗಳನ್ನೂ, ಅವುಗಳ ಮೇಲೆ ಅಧಿಪತಿಗಳನ್ನೂ ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |