ವಿಮೋಚನಕಾಂಡ 15:21 - ಕನ್ನಡ ಸತ್ಯವೇದವು J.V. (BSI)21 ವಿುರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು- ಯೆಹೋವನನ್ನು ಗಾನಮಾಡಿರಿ; ಆತನು ಮಹಾಜಯಶಾಲಿಯಾದನು; ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: “ಯೆಹೋವನಿಗೆ ಗಾನಮಾಡಿರಿ; ಆತನು ಮಹಾಜಯಶಾಲಿಯಾದನು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು…” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವ ದೇವರಿಗೆ ನೀವು ಹಾಡಿರಿ, ಅವರು ಮಹೋನ್ನತದಲ್ಲಿದ್ದಾರೆ; ಕುದುರೆಯನ್ನೂ ಸವಾರರನ್ನೂ ಸಮುದ್ರದಲ್ಲಿ ಮುಣುಗಿಸಿಬಿಟ್ಟರು.” ಅಧ್ಯಾಯವನ್ನು ನೋಡಿ |
[ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.